ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆ.22, 25, 27, 30 ಹಾಗೂ ಅಕ್ಟೋಬರ್ 4ರಂದು ಚಾಂಪಿಯನ್ಸ್ ಲೀಗ್ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿರುವುದರಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಕ್ರಿಕೆಟ್ ಪ್ರೇಮಿಗಳು ಬಿಎಂಟಿಸಿ ಬಸ್ ಬಳಸಲು ಸಂಚಾರ ಪೊಲೀಸರು ಕೋರಿದ್ದಾರೆ. ಪಂದ್ಯ ನಡೆಯುವ ದಿನಗಳಂದು ಬಿಎಂಟಿಸಿ ಬಿಗ್ 10 ಬಸ್ ವ್ಯವಸ್ಥೆ ಕಲ್ಪಿಸಲಿದೆ.
ಸೆ.22ರಂದು ಸಂಜೆ 4ರಿಂದ 11ರವರೆಗೆ ವಾಹನ ನಿಲುಗಡೆ ನಿಷೇಧಿಸಿರುವ ಸ್ಥಳಗಳು
ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಒ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆ
ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ
ಲಿಂಕ್ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆವರೆಗೆ
ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
ಕ್ರಿಕೆಟ್ ಮೈದಾನದ ಕಾಂಪೌಂಡಿಗೆ ಹೊಂದಿಕೊಂಡಂತೆ ರಸ್ತೆಯ ಎರಡೂ ಕಡೆ
ಸೆಂಟ್ರಲ್ ಸ್ವೀಟ್ ರಸ್ತೆಯ ಎರಡೂಕಡೆ
ಕಬ್ಬನ್ ರಸ್ತೆಯಲ್ಲಿ-ಬಿ.ಆರ್.ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂಕಡೆ
ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್‌ವರೆಗೆ ಬಿ.ಎಂ.ಟಿ.ಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ವಾಹನಗಳ ನಿಲುಗಡೆ ನಿಷೇಧಿಸಿದೆ.
ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್‌ಬಿಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ
ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ
ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಗ್ರ್ಯಾಂಡ್‌ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ
ಕಬ್ಬನ್ ಪಾರ್ಕ್‌ಒಳಭಾಗದ ಕಿಂಗ್ ರಸ್ತೆ,ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧ
ಬಿ.ಆರ್.ಜಂಕ್ಷನ್‌ನಿಂದ, ಬಿ.ಆರ್.ಮೈದಾನದ ಪ್ರವೇಶದವರೆಗೆ ಕಬ್ಬನ್ ರಸ್ತೆಯಲ್ಲಿ ರಸ್ತೆಯ ಒಂದು ಬದಿಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ಮತ್ತೊಂದು ಬದಿಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಪಾರ್ಕಿಂಗ್ ವ್ಯವಸ್ಥೆ
ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ
ಕಾಮರಾಜ ರಸ್ತೆಯ ಆರ್ಮಿಶಾಲೆ ಮುಂಭಾಗ ಪಾರ್ಕಿಂಗ್ ಜಾಗ
ಸೇಂಟ್‌ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ
ಸೇಂಟ್‌ಮಾರ್ಕ್ಸ್ ರಸ್ತೆ ಕ್ಯಾಥಡ್ರಲ್ ಚರ್ಚ್ ಆವರಣದಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


