ಜಿಲ್ಲಾ ಸುದ್ದಿ

ಮೋದಿ ಭೇಟಿ: ಪೊಲೀಸ್ ಭದ್ರತೆ

ಮೋದಿ ಭೇಟಿ: ಪೊಲೀಸ್ ಭದ್ರತೆ
Published On :

ಬೆಂಗಳೂರು: ಪೀಣ್ಯದ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮಂಗಳವಾರ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಝಡ್ ಕೆಟಗೆರಿ ಸೆಕ್ಯುರಿಟಿ ಹೊಂದಿರುವ ಮೋದಿ ಭದ್ರತೆಗೆ ಇರುವ ವಿಶೇಷ ಭದ್ರತಾ ಪಡೆ ಜತೆಗೆ ನಗರ ಪೊಲೀಸರ ಭದ್ರತೆ ಇರಲಿದೆ.

ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೋದಿ ಸಂಚರಿಸುವ ಮಾರ್ಗದ ಉದ್ದಕ್ಕೂ ಕಾನೂನು ಸುವ್ಯವಸ್ಥೆ ಪೊಲೀಸರು ಹಾಗೂ ಸಂಚಾರ ನಿಯಂತ್ರಣಕ್ಕೆ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿರುತ್ತದೆ .

ಈ ಮಾರ್ಗದಲ್ಲಿ ಪ್ರತಿಭಟನೆ, ಮೆರವಣಿಗಗಳಿಗೆ ಅವಕಾಶ ನೀಡಲಾಗಿಲ್ಲ. ಮಂಗಳವಾರ ಸಂಜೆ 6 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ, ವಿಮಾನ ನಿಲ್ಧಾಣ ಮುಂಭಾಗ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡವರು.

ರಾತ್ರಿ ರಾಜಭವನದಲ್ಲಿ ವಾಸ್ತವ್ಯ. ಬುಧವಾರ ಬೆಳಗ್ಗೆ ಪೀಣ್ಯದ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ತುಮಕೂರಿಗೆ ಪ್ರಯಾಣ. ಈ ಹಿಂದೆ ರಾಷ್ಟ್ರಪತಿ, ಪ್ರಧಾನಿ ನಗರಕ್ಕೆ ಭೇಟಿ ನೀಡಿದ ವೇಳೆ ಕೈಗೊಳ್ಳುವ ಬಂದೋಬಸ್ತ್‌ಗಿಂತ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.