ಜಿಲ್ಲಾ ಸುದ್ದಿ

ಫ್ಲೆಕ್ಸ್ ಬ್ಯಾನರ್ ಹಾಕಿದವರಿಗೆ ಗ್ರಹಚಾರ

ಫ್ಲೆಕ್ಸ್ ಬ್ಯಾನರ್ ಹಾಕಿದವರಿಗೆ ಗ್ರಹಚಾರ
Published On :

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಅನುಮತಿಯಿಲ್ಲದೇ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿದ್ದವರಿಗೆ ಗ್ರಹಚಾರ ಕಾದಿದೆ!

ಅನುಮತಿ ಇಲ್ಲದೆ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರ ವಿರುದ್ಧ ಕೂಡಲೇ ಕೇಸು ದಾಖಲಿಸುವಂತೆ ಉಪ ಲೋಕಾಯುಕ್ತರು ಬಿಬಿಎಂಪಿಗೆ ಸೂಚಿಸಿದ್ದಾರೆ. ನರೇಂದ್ರ ಮೋದಿ ಅವರ ನಗರ ಪ್ರವಾಸದ ಹಿನ್ನಲೆಯಲ್ಲಿ ಕೆಲವು ರಾಜಕೀಯ ಮುಖಂಡರು ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಬಿಬಿಎಂಪಿಯಿಂದ ಅನುಮತಿ ಕೇಳಿದ್ದರು.

ಈ ಹಿನ್ನಲೆಯಲ್ಲಿ 90 ಫ್ಲೆಕ್ಸ್ ಹಾಗೂ 50 ಕೆ.ಜೆ ಬಂಟಿಂಗ್ಸ್ ಹಾಕಲು ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ, ಮೋದಿ ಅವರಿಗೆ ಸ್ವಾಗತ ಹಾಗೂ ಶುಭಾಶಯ ಕೋರಲು 500ಕ್ಕೂ ಹೆಚ್ಚು ಫ್ಲೆಕ್ಸ್ ಹಾಗೂ 300 ಕೆ.ಜಿ ಗೂ ಹೆಚ್ಚನ ಬಂಟಿಂಗ್ಸ್ ಹಾಕಲಾಗಿದೆ ಎಂದು ಕರ್ನಾಟಕ ಜನಹಿತ ವೇದಿಕೆ ಉಲ ಲೋಕಾಯುಕ್ತರಿಗೆ ದೂರು ಸಲ್ಲಿಸಿತ್ತು.

ಅಲ್ಲದೆ, ಅನಧಿಕೃತ ಜಾಹೀರಾತು ಹಾಕದಂತೆ ಲೋಕಾಯುಕ್ತರ ಆದೇಶವಿದ್ದರೂ ಅನಧಿಕೃತ ಜಾಹೀರಾತು ಹೆಚ್ಚಾಗಿದೆ ಎಂದು ವೇದಿಕೆ ಅಧ್ಯಕ್ಷ ಸಾಯಿದತ್ತ ಹೇಳಿದ್ದರು. ಇದನ್ನು ಪರಿಗಣಿಸಿದ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಅಡಿ ಅವರು ಅನಧಿಕೃತ ಜಾಹೀರಾತು ಹಾಕಿರುವವರನ್ನು ಯಾವುದೇ ಕಾರಣಕ್ಕೂ ಬಿಡದೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

ಫ್ಲೆಕ್ಸ್, ಬ್ಯಾನರ್ ಮೂಲಕ ಜಾಹೀರಾತು ಹಾಕಿದವರು ಶಾಸಕರು, ಪಾಲಿಕೆ ಸದಸ್ಯರು ಯಾರೇ ಆದರೂ ಅವರ ವಿರುದ್ಧ ಸಾರ್ವಜನಿಕ ಸ್ಥಳ ವಿರೂಪಗಳಿಸಬಾರದೆಂದು 1081 ರ ಕಾಯ್ದೆ ಪ್ರಕಾರ ಕೇಸು ದಾಖಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.