ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು: ನವಾರತ್ರಿ ಹಬ್ಬಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸಿಎಂ ಸಿದ್ಧರಾಮಯ್ಯ, ತುಟ್ಟಿಭತ್ಯೆ, ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದಾರೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.7ರಷ್ಟು ಹೆಚ್ಚಿಸಿದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಿ ನೌಕರರೂ ತುಟ್ಟಿಭತ್ಯೆ ಹೆಚ್ಚಳಕ್ಕೆ ಮನವಿ ಸಲ್ಲಿಸಿದ್ದರು.
ಇದಕ್ಕೆ ಸ್ಪಂಧಿಸಿರುವ ಸರ್ಕಾರ, ಮೂಲವೇತನದ ಶೇ.4.25ರಷ್ಟು ಹೆಚ್ಚಳಕ್ಕೆ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆ ಜಾರಿಗೆ ಬರಲಿದ್ದು, ರಾಜ್ಯದ 6 ಲಕ್ಷ ಸರ್ಕಾರಿ ನೌಕರರಿಗೆ ಪ್ರಯೋಜನವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ರು.660 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


