ತಾಕತ್ತಿದ್ದರೆ ರೈತರ ಮೈ ಮುಟ್ಟಿ: ಸರ್ಕಾರಕ್ಕೆ ಈಶ್ವರಪ್ಪ ಸವಾಲು

ಶಿವಮೊಗ್ಗ: ಬಗರ್ಹುಕುಂ ರೈತರಿಗೆ ನೋಟಿಸ್ ನೀಡಿ ರಾಜ್ಯ ಸರ್ಕಾರ ವಿನಾಕಾರಣ ಗೊಂದಲ ಎಬ್ಬಿಸುತ್ತಿದೆ. ತಾಕತ್ತಿದ್ದರೆ ಒಬ್ಬ ರೈತನನ್ನು ಮುಟ್ಟಿ ನೋಡಲಿ ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಸಿಎಂ ಅವರು ಬಗರ್ಹುಕುಂ ರೈತರ ಪರ ಹೋರಾಟ ಮಾಡಿದ ಮುಖಂಡರು, ಪ್ರತಿಪಕ್ಷಗಳ ಮುಖಂಡರ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ. ಎಲ್ಲರೂ ಕೂಡಿ ಸಮಸ್ಯೆ ಪರಿಹರಿಸೋಣ ಎಂದು ಹೇಳುತ್ತಿದ್ದೇವೆ. ಇದು ರೈತರ ಸಮಸ್ಯೆ, ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದೆಂಬುದಷ್ಟೇ ನಮ್ಮ ಕಾಳಜಿ ಎಂದರು.
ಬಗರ್ಹುಕುಂ ಸಮಿತಿ ಇನ್ನೂ ಅನೇಕ ಕಡೆ ರಚನೆಯಾಗಿಲ್ಲ. ಯಾವುದು ಕಂದಾಯ ಭೂಮಿ, ಯಾವುದು ಅರಣ್ಯಭೂಮಿ ಎಂಬುದೇ ನಿರ್ಧಾರವಾಗಿಲ್ಲ. ಈ ಮಧ್ಯೆಯೇ ಸರ್ಕಾರ ನೋಟಿಸ್ ಕೊಡುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


