

ಬೆಂಗಳೂರು: ಕಳೆದ ಮೂರು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಮ್ಮಾ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪರಪ್ಪನ ಅಗ್ರಹಾರದ ಜೈಲಿನ ಮುಂದೆ 50ಕ್ಕೂ ಹೆಚ್ಚು ಅಮ್ಮಾ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಯಲಲಿತಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.