ಹಿರಿಯ ನಾಗರಿಕರ ಸಹಾಯವಾಣಿ ವಿಸ್ತರಣೆ

ಕ.ಪ್ರ.ವಾರ್ತೆ, ಬೆಂಗಳೂರು, ಸೆ.30: ಹಿರಿಯ ನಾಗರಿಕರ ಸಹಾಯವಾಣಿ (1090)ಯನ್ನು ರಾಜ್ಯದ ಎಲ್ಲ ಜಿಲ್ಲೆಗೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅ.1ರ ಬುಧವಾರದಂದು 12 ಜಿಲ್ಲೆಗಳಲ್ಲಿ ಈ ಸಹಾಯವಾಣಿಗೆ ಚಾಲನೆ ನೀಡಲಾಗುತ್ತದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕ ಮಗಳೂರು, ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಉಡುಪಿ, ಉತ್ತರಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಸಹಾಯವಾಣಿಗೆ ಚಾಲನೆ ದೊರೆಯಲಿದೆ.
ಆಯಾ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಸಹಾಯವಾಣಿಗೆ ಚಾಲನೆ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವೆ ಉಮಾಶ್ರೀ ಮಂಗಳವಾರ ತಿಳಿಸಿದರು.
ಸಹಾಯವಾಣಿಗೆ ನೀಡಲಾಗುತ್ತಿದ್ದ ರು.3.60 ಲಕ್ಷ ಅನುದಾನವನ್ನು ರು.7.15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿರುವ 28 ವೃದ್ಧಾಶ್ರಮಗಳಿಗೆ ಸರ್ಕಾರ ನೀಡಲಾಗುತ್ತಿರುವ ವಾರ್ಷಿಕ ಅನುದಾನವನ್ನು ರು.1.96 ಲಕ್ಷದಿಂದ ರು.8 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಕೇಂದ್ರ ಸರ್ಕಾರ ಪ್ರತಿ ವೃದ್ಧಾಶ್ರಮಕ್ಕೆ ರು.4.97 ಲಕ್ಷ ನೀಡುತ್ತದೆ. ಸರ್ಕಾರ ಅದಕ್ಕಿಂತ ಹೆಚ್ಚಿನ ಅನುದಾನ ನೀಡಲಿದೆ. ನಮ್ಮ ರಾಜ್ಯದಲ್ಲಿರುವ ವೃದ್ಧಾಶ್ರಮದಲ್ಲಿ ತಲಾ 25ರಿಂದ 30 ವೃದ್ಧಿರಿದ್ದಾರೆ ಎಂದು ಅಂಕಿ-ಅಂಶ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


