
ಬೆಂಗಳೂರು: ವಸತಿಸಚಿವ ಅಂಬರೀಷ್ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಮೂಲಕ ರಾಜಕೀಯ ಉಹಾಪೋಹಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ, ಸಚಿವರು ಹಾಗೂ ಆಪ್ತ ಸ್ನೇಹಿತರಿಗೆ ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು. ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂಬರೀಷ್ ಮಧ್ಯೆ ಶೀತಲ ಸಮರ ನಡೆಯುತ್ತಿದೆ ಎನ್ನಲಾಗುತ್ತಿತ್ತು. ಇದಲ್ಲದೇ ಉಭಯ ನಾಯಕರು ಬಹಿರಂಗವಾಗಿಯೇ ಕೆಲ ಹೇಳಿಕೆಗಳನ್ನು ನೀಡಿದ್ದರು.
ಔತಣ ಕೂಟಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಮುಖಂಡರು ಹೇಳುತ್ತಿದ್ದರೂ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಕುತೂಹಲ ಹುಟ್ಟಿಸಿದೆ
Advertisement