
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಬರಜೀರಳ್ಳಿಯಲ್ಲಿ ಇಂದು ಮುಂಜಾನೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ತುಮಕೂರಿನಿಂದ ನಾಗಮಂಗಲಕ್ಕೆ ಕಾರಿನಲ್ಲಿ ತೆರಳುತ್ತಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಲಜಾಕ್ಷಿ(55), ರತ್ನಮ್ಮ(53), ಹಾಗೂ ನಂಜಪ್ಪ(68) ಮೃತಪಟ್ಟಿದ್ದಾರೆ. ಮತ್ತೆ ಕಾರಿನಲ್ಲಿದ್ದ ಮೂವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಕೆ ಆರ್ ಎಸ್ ನ ರೈಲ್ವೇ ಸ್ಟೇಷನ್ ರಸ್ತೆ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement