
ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ಏ.13ರಂದು ಅಧಿಸೂಚನೆ ಹೊರಡಿಸುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಪೂರ್ವ ತಯಾರಿ ಕೂಡ ಆರಂಭಗೊಂಡಿವೆ.
ಹೀಗಾಗಿ ಅರ್ಜಿಯ ತುರ್ತು ವಿಚಾರಣೆ ಅಗತ್ಯವಿದ್ದು ಏಕಸದಸ್ಯ ಪೀಠದ ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ವಿಭಾಗೀಯ ಪೀಠಕ್ಕೆ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲಾ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ಪೀಠ, ಸೋಮವಾರ ವಿಚಾರಣೆ ನಡೆಸುವುದಾಗಿ ತಿಳಿಸಿ, ಮುಂದೂಡಿತು.
Advertisement