ಮೇಕೆದಾಟು ಹೋರಾಟಕ್ಕೆ ಬೆಂಬಲ: ಶಿವರಾಜ್‍ಕುಮಾರ್
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಹೋರಾಟ ಅಗತ್ಯವಿದ್ದು, ಇದಕ್ಕೆ ರಾಜ್ ಕುಟುಂಬದ ಬೆಂಬಲವಿದೆ ಎಂದು ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ.
ವರನಟ ಡಾ.ರಾಜ್‍ಕುಮಾರ್ ಅವರು 9ನೇ ಪುಣ್ಯ ತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸ್ಮಾರಕ ಸಮಾಧಿಗೆ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರಿಗೆ ಮಾತನಾಡಿದರು. `ಕುಡಿಯುವ ನೀರಿಗಾಗಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಬಗ್ಗೆ ಚಿಂತಿಸಿದೆ. ಆದರೆ, ಇದಕ್ಕೆ ತಮಿಳುನಾಡು ಆರಂಭದಲ್ಲೇ ವಿರೋಧಿಸುತ್ತಿರುವುದು ಸರಿಯಲ್ಲ.
ಈ ವಿಚಾರದಲ್ಲಿ ತಮಿಳುನಾಡಿನ ಧೋರಣೆಯನ್ನು ಖಂಡಿಸಿ ಕನ್ನಡ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಕುಟುಂಬದ ಬೆಂಬಲವಿದೆ. ಏ.18ರಂದು ನಡೆಯುವ ಕರ್ನಾಟಕ ಬಂದ್‍ನಲ್ಲಿ ನಾನೂ ಭಾಗವಹಿಸುತ್ತೇನೆ' ಎಂದರು. ರಾಜ್ಯದ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ನಾವು ಮತ್ತು ನಮ್ಮ ಕುಟುಂಬ ಸದಾ ಹೋರಾಟಕ್ಕೆ ಇಳಿಯುತ್ತೇವೆ. ನಾಡಿಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗದಂತೆ ವಿರೋಧಿಸುತ್ತೇವೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ