
ಬೆಂಗಳೂರು: ಬಿಬಿಎಂಪಿ ಮೂರು ಭಾಗವಾಗಿಸುವ ಮೂಲಕ ಕಾಂಗ್ರೆಸ್ ತನ್ನ ವಿನಾಶವನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕತೆಯನ್ನು ಒಡೆದು ಸೇಡಿನ ರಾಜಕಾರಣ ಮಾಡುವ ಕಾಂಗ್ರೆಸ್ ಸರ್ಕಾರದಿಂದ ನಗರದಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗಲಿದೆ. ವಿಭಜನೆಯಿಂದ ಕನ್ನಡಿಗರು ಅಲ್ಪಸಂಖ್ಯಾತರಾಗುವುದು ಮಾತ್ರವಲ್ಲದೆ, ನಗರದ ಆರ್ಥಿಕ ಸ್ಥಿತಿ ದಿವಾಳಿಯಾಗಲಿದೆ. ಬಿ.ಎಸ್.ಪಾಟೀಲ ನೇತೃತ್ವದ ತಜ್ಞರ ಸಮಿತಿ ವರದಿ ನೀಡುವ ಮುನ್ನವೇ ಸರ್ಕಾರ ವಿಭಜಿಸುತ್ತಿರುವುದರ ಹಿಂದೆ ಯಾವ ಉದ್ದೇಶವಿದೆ ಎಂಬದನ್ನು ಸರ್ಕಾರ ಸ್ಪಷ್ಟಪಡಿಸಬೇಕು.
ದೆಹಲಿ ಪಾಲಿಕೆ ಭಾಗವಾದ ನಂತರ ಈಗ ಮತ್ತೆ ಒಂದಾಗಲು ಮೇಯರ್ ಗಳು ಚಿಂತಿಸುತ್ತಿದ್ದಾರೆ. ಬಿಬಿಎಂಪಿ ಮೂರು ಭಾಗವಾದರೆ ಮುಂದಿನ ದಿನಗಳಲ್ಲಿ ಮತ್ತೆ ಒಂದಾಗುವ ಅನಿವಾರ್ಯ ಸೃಷ್ಟಿಯಾಗುತ್ತದೆ ಎಂದರು.
Advertisement