ಅತಿಕ್ರಮಣಕ್ಕೆ ಕಟಾರಿಯಾ ವರದಿ ಕಾರಣ!

ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರ ಹಾಗೂ ಆರ್ಥಿಕ ಅಶಿಸ್ತಿನ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೇತೃತ್ವದ ಏಕಸದಸ್ಯ ಸಮಿತಿಯನ್ನು ಸರ್ಕಾರ ರಚಿಸಲಾಗಿತ್ತು.
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರ ಹಾಗೂ ಆರ್ಥಿಕ ಅಶಿಸ್ತಿನ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೇತೃತ್ವದ ಏಕಸದಸ್ಯ ಸಮಿತಿಯನ್ನು ಸರ್ಕಾರ ರಚಿಸಲಾಗಿತ್ತು.

ಈ ವರದಿ ಆಧಾರಸಿ ಮಾ.18ರಂದು ಎಲ್ಲ ಕಾರ್ಪೋರೇಟರ್ಗಳಿಗೆ ಸರ್ಕಾರ ನೋಟಿಸ್ ಜಾರಿ ಮಾಡಿ ಬಿಬಿಎಂಪಿಯನ್ನು ಏಕೆ ವಿಸರ್ಜಿಸಬಾರದು ಎಂದು ಕಾರಣ ಕೇಳಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೌನ್ಸಿಲ್ ಸಭೆಯಲ್ಲಿ ಮಾ.30ರಂದು ಬಿಜೆಪಿ ಆಡಳಿತ ಒಂದು ನಿರ್ಣಯ ಕೈಗೊಂಡು, ಸರ್ಕಾರಕ್ಕೆ ಕಾಲಾವಕಾಶ ಕೇಳಲು ನಿರ್ಧರಿಸಿತ್ತು.  ಎಷ್ಟು ಕಾಲಾವಕಾಶ ಎಂದು ನಮೂದಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಆರ್ಥಿಕ ಅಶಿಸ್ತು ಹಾಗೂ ಅವ್ಯವಹಾರಗಳು ಹೆಚ್ಚಾಗಿರುವುದರಿಂದ ಬಿಬಿಎಂಪಿಯನ್ನು ವಿಸರ್ಜನೆ ಮಾಡಲು ಸಚಿವ ಸಂಪುಟ ಶುಕ್ರವಾರ ನಿರ್ಧರಿಸಿತ್ತು.

ತ್ರಿಭಜನೆಗೆ ಬಿಡಲ್ಲ
ಯಾದಗಿರಿ:
ಯಾವುದೇ ಕಾರಣಕ್ಕೂ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಲು ಬಿಜೆಪಿ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಏ.20ರಂದು ವಿಶೇಷ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಆಗ ನಮ್ಮ ಪಕ್ಷ ವಿರೋಧ ವ್ಯಕ್ತಪಡಿಸುವ ಮೂಲಕ ಸರ್ಕಾರದ
ಕ್ರಮದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರ ಜೊತೆಗೂ ಮಾತನಾಡಿ `ಕಲಾಪದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕೈಜೋಡಿಸಲು ಮನವಿ ಮಾಡಿದ್ದೇವೆ, ಅದಕ್ಕೆ ಅವರೂ ಸ್ಪಂದಿಸಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com