ಬಿಬಿಎಂಪಿ ಚುನಾವಣೆ: ಏ. 24ಕ್ಕೆ ಹೈಕೋರ್ಟ್ ತೀರ್ಪು ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಏಪ್ರಿಲ್ 24ಕ್ಕೆ ಕಾಯ್ದಿರಿಸಿದೆ.
ಕರ್ನಾಟಕ ಹೈ ಕೋರ್ಟ್
ಕರ್ನಾಟಕ ಹೈ ಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಏಪ್ರಿಲ್ 24ಕ್ಕೆ ಕಾಯ್ದಿರಿಸಿದೆ.

ಬಿಬಿಎಂಪಿ ಚುನಾವಣೆ ತ್ರಿಶಂಕು ಸ್ಥಿತಿಗೆ ಏ.24ರಂದು ತೆರೆ ಬೀಳಲಿದೆ. ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ರಾಮಮೋಹನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠ ಬುಧವಾರ ತೀರ್ಪನ್ನು ಕಾಯ್ದಿರಿಸಿದೆ.

ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಸದ್ಯ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಲಾಗಿದೆ. 6 ತಿಂಗಳಿನಲ್ಲಿ ಚುನಾವಣೆ ನಡೆಸುತ್ತೇವೆ. ಆದ್ದರಿಂದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಾದ ಮಂಡಿಸಿದರು. ಹೈಕೋರ್ಟ್ ಆದೇಶದಿಂದ ಸರ್ಕಾರಕ್ಕೆ ಸ್ಪಲ್ಪ ಸಮಾಧಾನ ತಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com