
ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಪೇಂಟರ್ ವಿಜಯ್ ದೇಹದಿಂದ ಕಣ್ಣು, ಲಿವರ್ ಮತ್ತು ಹೃದಯದ ರಕ್ಷಣಾ ಕವಾಟವನ್ನು ವೈದ್ಯರು ದಾನವಾಗಿ ಪಡೆದಿದ್ದಾರೆ.
ವಿಜಯ್ ಹೃದಯ ಮತ್ತು ಕಿಡ್ನಿ ಆರೋಗ್ಯವಾಗಿ ಇಲ್ಲದ ಕಾರಣಕ್ಕೆ ಅವುಗಳನ್ನು ಪಡೆದಿಲ್ಲ. ಲಿವರ್ ಭಾಗವನ್ನು ಮತ್ತೊಬ್ಬರಿಗೆ ಕಸಿ ಮಾಡುವ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ರವಾನಿಸಲಾಗಿದೆ. ಅದೇ ರೀತಿ ಹೃದಯ ಕವಾಟವನ್ನು ನಾರಾಯಣ ಹೃದಯಾಲಯಕ್ಕೆ ಒಪ್ಪಿಸಲಾಗಿದ್ದು, ಅಲ್ಲಿನ ವೈದ್ಯರ ನಿರ್ಧರದಂತೆ ಕಸಿ ಮಾಡುವ ಪ್ರಕ್ರಿಯೆ ನಡೆಯುತ್ತದೆ ಎಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಅಂಗಾಂಗ ಪಡೆದು ಬುಧವಾರ ಮಧ್ಯಾಹ್ನ 3 ಗಂಟೆಗೆ ವಿಜಯ್ ಮೃತ ದೇಹವನ್ನು ಪಾಲಕರಿಗೆ ಒಪ್ಪಿಸಿದರು. ಗುರುವಾರ ಮಧ್ಯಾಹ್ನ 2 ಗಂಟೆಗೆ ಹಳೆಗುಡ್ಡದಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದರು.
Advertisement