ಮಲ್ಲೇಶ್ವರಂ ಸ್ಫೋಟ: 1 ಕೋಟಿ ಪರಿಹಾರ ಕೋರಿ ಸಂತ್ರಸ್ತೆ ಲಿಶಾ ಹೈಕೋರ್ಟ್‌ಗೆ ಅರ್ಜಿ

ಒಂದು ಕೋಟಿ ರೂಪಾಯಿ ಪರಿಹಾರ ಹಾಗೂ ಉದ್ಯೋಗದ ಅವಕಾಶ ಕಲ್ಪಿಸಿಕೊಡುವಂತೆ ಕೋರಿ 2013ರಲ್ಲಿ ಮಲ್ಲೇಶ್ವರಂನ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ...
ಸಂತ್ರಸ್ತೆ ಲಿಶಾ
ಸಂತ್ರಸ್ತೆ ಲಿಶಾ

ಬೆಂಗಳೂರು: ಒಂದು ಕೋಟಿ ರೂಪಾಯಿ ಪರಿಹಾರ ಹಾಗೂ ಉದ್ಯೋಗದ ಅವಕಾಶ ಕಲ್ಪಿಸಿಕೊಡುವಂತೆ ಕೋರಿ 2013ರಲ್ಲಿ ಮಲ್ಲೇಶ್ವರಂನ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ಲಿಶಾ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.

ವಿಕಲಚೇತನ ಕೋಟಾದಡಿ ಉದ್ಯೋಗ, ಒಂದು ಕೋಟಿ ರೂಪಾಯಿ ಪರಿಹಾರ ಹಾಗೂ ಮುಂದಿನ ವೈದ್ಯಕೀಯ ವೆಚ್ಚ ಭರಿಸುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾಳೆ. ಅಲ್ಲದೇ ಉಗ್ರರ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ರೂಪಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದಾಳೆ.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಕಳೆದ 2013ನೇ ಸಾಲಿನಲ್ಲಿ ನಗರದ ಮಲ್ಲೇಶ್ವರಂ ಕಚೇರಿಯ ಮುಂಭಾಗದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ವಿದ್ಯಾರ್ಥಿನಿ ಲಿಷಾ ತೀವ್ರವಾಗಿ ಗಾಯಗೊಂಡಿದ್ದಳು. ಪರಿಣಾಮ ಕಾಲಿಗೆ ತೀವ್ರ ಗಾಯಗಳಾಗಿದ್ದು, ವಿಕಲಾಂಗಿಯಾಗಿರುವ ಈಕೆ ಇದಾಗಲೇ 7 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾಳೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com