
ರಾಯಚೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾ ಗಾಂಧಿಗೆ ರಾಯಚೂರಿನ ಜೆಎಂಎಫ್ ಸಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಪೂಜಾ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಮುಂದೆ ಹಾಜರಾದ ಪೂಜಾ ಗಾಂಧಿ ತಮ್ಮ ವಿರುದ್ಧ ಜಾರಿಯಾಗಿರುವ ವಾರಂಟ್ ಹಿಂಪಡೆಯುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಪೂಜಾಗಾಂಧಿಯನ್ನು ವಿಚಾರಣೆ ಕೊನೆಯವರೆಗೂ ಕಸ್ಟಡಿಗೆ ನೀಡಿತ್ತು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ ಗಾಂಧಿ 500 ರು. ದಂಡ ವಿಧಿಸಿ ಷರತ್ತುಬದ್ಧ ಜಾಮೀನು ನೀಡಿದೆ.
2013ರ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಿಂದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೂಜಾ ಗಾಂಧಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಅವರು ಸತತ ಮೂರು ಬಾರಿ ಗೈರು ಹಾಜರಾದ ಕಾರಣ ಈ ವಾರಂಟ್ ಜಾರಿ ಮಾಡಲಾಗಿತ್ತು.
Advertisement