ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಆದೇಶ ಹೊರಡಿಸಿದ ಮೈಸೂರು ಮೆಡಿಕಲ್ ಕಾಲೇಜು

ಪ್ರತಿಷ್ಠಿತ ಮೈಸೂರು ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ತಮ್ಮ ಕಾಲೇಜು ವಿದ್ಯಾರ್ಥಿನಿಯರು ಜೀನ್ಸ್ ಪ್ಯಾಂಟ್ ಮತ್ತು ಟೀ ಶರ್ಟ್...
ಡ್ರೆಸ್ ಕೋಡ್
ಡ್ರೆಸ್ ಕೋಡ್

ಮೈಸೂರು: ಪ್ರತಿಷ್ಠಿತ ಮೈಸೂರು ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ತಮ್ಮ ಕಾಲೇಜು ವಿದ್ಯಾರ್ಥಿನಿಯರು ಜೀನ್ಸ್ ಪ್ಯಾಂಟ್ ಮತ್ತು ಟೀ ಶರ್ಟ್ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಫಾರ್ಮಲ್ ಶರ್ಟ್ ಹಾಗೂ ಪ್ಯಾಂಟನ್ನೇ ಧರಿಸಿ ಕಾಲೇಜಿಗೆ ಬರುವಂತೆ ಆದೇಶ ಹೊರಡಿಸಿದೆ.

ಏಪ್ರಿಲ್ 25ರಂದು ಡ್ರೆಸ್ ಕೋಡ್ ಜಾರಿ ಮಾಡಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು ಇದಕ್ಕೆ ವಿದ್ಯಾರ್ಥಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವೈದ್ಯಕೀಯ ವಿದ್ಯಾರ್ಥಿನಿಯರು ಚೂಡಿದಾರ್, ಸೀರೆಯನ್ನು ಧರಿಸಬೇಕು. ಬಿಗಿಯಾದ ಜೀನ್ಸ್ ಪ್ಯಾಂಟ್, ಟೀ ಶರ್ಟ್ , ಸ್ಲೀವ್ ಲೆಸ್ ಬಟ್ಟೆಗಳನ್ನು ಧರಿಸಿ ಕಾಲೇಜಿಗೆ ಬರುವಂತಿಲ್ಲ. ಅದೇ ರೀತಿ ವಿದ್ಯಾರ್ಥಿಗಳು ಫಾರ್ಮಲ್ ಶರ್ಟ್, ಪ್ಯಾಂಟ್ ಧರಿಸಬೇಕು. ಸ್ಲಿಪ್ಪರ್, ಕ್ಯಾನ್ ವಾಸ್ ಶೂ ಧರಿಸಿ ಕಾಲೇಜಿಗೆ ಬರುವಂತಿಲ್ಲ. ಅಲ್ಲದೆ ಯಾವುದೇ ವಿಧದ ಜೀನ್ಸ್ ಪ್ಯಾಂಟ್, ಟೀ ಶರ್ಟ್ ನ್ನು ಧರಿಸುವಂತಿಲ್ಲ ಎಂಬ ಷರತ್ತಿನ ಡ್ರೆಸ್ ಕೋಡ್ ಆದೇಶವನ್ನು ಜಾರಿ ಮಾಡಿತ್ತು.

ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಡ್ರೆಸ್ ಕೋಡ್ ಜಾರಿ ಮಾಡಿದ್ದೇವೆ. ಈ ಬಗ್ಗೆ ವಿವರಿಸಿ ಹೇಳಿದ್ದೇವೆ. ಹಾಗಾಗಿ ವಿದ್ಯಾರ್ಥಿಗಳು ಇದನ್ನು ಒಪ್ಪುತ್ತಾರೆ ಎಂದು ಕಾಲೇಜು ಪ್ರಾಂಶುಪಾಲರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com