
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಕೆಲ ಮಾಹಿತಿ ಕಲೆ ಹಾಕಲು ದೆಹಲಿಯ ಏಮ್ಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಸುಧೀರ್ ಗುಪ್ತಾ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ.
ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿಗೆ ಭೇಟಿ ನೀಡಲಿರುವ ಗುಪ್ತಾ ಅವರು ಎರಡು ದಿನಗಳ ಕಾಲ ನಗರದಲ್ಲೇ ತಂಗುವ ನಿರೀಕ್ಷೆ ಇದೆ. ಆ ಸಮಯದಲ್ಲಿ ಡಿ.ಕೆ.ರವಿ
ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾದ ಕೋರಮಂಗಲದ ಫ್ಲಾಟ್ ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿ.ಕೆ.ರವಿ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ನಿಖರವಾಗಿ ಪತ್ತೆ ಹಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಆದ್ದರಿಂದ ಈ ಪ್ರಕರಣದ ಮರಣೋತ್ತರ ವರದಿಯ ಬಗ್ಗೆ ತಜ್ಞರ ಅಬಿsಪ್ರಾಯ ಪಡೆಯಲು ಸಿಬಿಐ ನಿರ್ಧರಿಸಿದೆ. ಅದಕ್ಕಾಗಿ ಏಮ್ಸ್ ವೈದ್ಯರ ಸಹಾಯ ಕೋರಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಾ ನಗರಕ್ಕೆ ಆಗಮಿಸಲಿದ್ದಾರೆ.
Advertisement