ಜಿಲ್ಲಾ ಸುದ್ದಿ

ಆತ್ಮಹತ್ಯೆ ವಿಚಾರಕ್ಕೆ ಬಿಜೆಪಿ ರಾಜಕೀಯ

ಆತ್ಮಹತ್ಯೆ ವಿಚಾರಕ್ಕೆ ಬಿಜೆಪಿ ರಾಜಕೀಯ
ಆರ್.ಧ್ರುವನಾರಾಯಣ್
Published On :

ನವದೆಹಲಿ: ರೈತರ ಆತ್ಮಹತ್ಯೆ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಎಸ್.ಪಿ.ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ, ಮತ್ತು ಬಿ.ವಿ. ನಾಯಕ್ ಆರೋಪಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರ ರೇಷ್ಮೆ ಆಮದು ಸುಂಕ ಇಳಿಸಿದ್ದರಿಂದ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದೂ ದೂರಿದರು. ``ರೈತರ ಆತ್ಯಹತ್ಯೆ ಪ್ರಕರಣಗಳ ಕುರಿತು ಹಗುರವಾಗಿ ಮಾತನಾಡಬಾರದು. ಇದನ್ನು ರಾಜಕೀಯಗೊಳಿಸದೆ ನೊಂದವರಿಗೆ ಸಾಂತ್ವಾನ ಹೇಳಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ರಾಜ್ಯ ಸರ್ಕಾರದ
ವಿರುದ್ಧ ಸುಳ್ಳು ಆರೋಪ ಮಾಡಬಾರದು'' ಸಂಸದರು ಪ್ರತಿಪಾದಿಸಿದ್ದಾರೆ. ``ರೈತರು ಆತ್ಮಹತ್ಯೆ ಮಾಡಿಕೊಳ್ಳದೆ ಆತ್ಮ ಸ್ಥೈರ್ಯ ಹೊಂದಿರಬೇಕು. ರೈತರ ಏಳಿಗೆಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಧೈರ್ಯದಿಂದ ಇರಬೇಕು. ರಾಜ್ಯ ಸರ್ಕಾರವು ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಪ್ರತಿ ಲೀಟರ್ ಹಾಲಿಗೆ ರೂ. 4 ಪ್ರೋತ್ಸಾಹ ಧನ ಸಹಾಯ, ಶಾಲಾ ಮಕ್ಕಳಿಗೆ ಹಾಲು ವಿತರಣೆ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್‍ಗೆ ರೂ. 100 ಪ್ರೋತ್ಸಾಹ ಧನ ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

ಪರಿಶಿಷ್ಟ ಜನಾಂಗದ ರೈತರ ರೂ. 35 ಕೋಟಿ ಸಾಲವನ್ನು ಮನ್ನ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ನೀಡಲಾಗುತ್ತಿದೆ. ಹೆಚ್ಚಿನ ಬಡ್ಡಿದರದ ಲೇವಾದೇವಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಿಂದ ಬೆಳೆಹಾನಿಯಾದ ಭತ್ತದ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ ರೂ. 25 ಸಾವಿರ ಪರಿಹಾರ ನೀಡಲಾಗಿದೆ. ಹನಿ ನೀರಾವರಿಗೆ ಶೇ.90 ರಷ್ಟು ರಿಯಾಯಿತಿ ಸೌಲಭ್ಯ ನೀಡಲಾಗಿದೆ'' ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.