
ಬೆಂಗಳೂರು: ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಮಾಡಿದವರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಹಾಕಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಅನೇಕ ಸಹಕಾರಿ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಆ ಸಂದರ್ಭದಲ್ಲಿ ಮತದಾನ ಮಾಡಿದವರ ಬಲಗೈನ ಕೆಲವು ಬೆರಳುಗಳಿಗೆ ಶಾಯಿ ಹಾಕಲಾಗಿದೆ. ಆದ್ದರಿಂದ ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಬಲಗೈ ಬೆರಳುಗಳಿಗೆ ಹಾಕಿದರೆ ಗೊಂದಲವಾಗುತ್ತದೆ ಎಂದುತೀರ್ಮಾನ ಕೈಗೊಳ್ಳಲಾಗಿದೆ.
ಮೈಸೂರು ಬಣ್ಣ ಮತ್ತು ಅರಗು ಸಂಸ್ಥೆಯಿಂದ ಈಗಾಗಲೇ ಶಾಯಿ ಪಡೆಯಲಾಗಿದ್ದು, ಅವುಗಳನ್ನು ಸಂಬಂಧಿಸಿದ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ. ಹಾಗೆಯೇ ಈ ಬಗ್ಗೆ ಜಿಲ್ಲಾ ಮತ್ತು ಬೆಂಗಳೂರು ದಕ್ಷಿಣ, ಕೇಂದ್ರ ಹಾಗೂ ಮಹದೇವಪುರ ವ್ಯಾಪ್ತಿಯ ಚುನಾವಣಾ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ರಾಜ್ಯ ಚುನಾವಣೆ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಹೇಳಿದ್ದಾರೆ
Advertisement