ಬೆಂಗಳೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

ಯಶವಂತಪುರ ರೈಲು ನಿಲ್ದಾಣ ಮತ್ತು ಯಶವಂತಪುರ ಟಿಟಿಎಂಸಿ ಬಸ್ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಶುಕ್ರವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣ ಮತ್ತು ಯಶವಂತಪುರ ಟಿಟಿಎಂಸಿ ಬಸ್ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಶುಕ್ರವಾರ ಬಂದ ಹುಸಿ ಬಾಂಬ್ ಕರೆಯೊಂದು ಆತಂಕದ ವಾತಾವರಣ ಸೃಷ್ಟಿಸಿತ್ತು ಮಧ್ಯಾಹ್ನ 4 ಗಂಟೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ದುಷ್ಕರ್ಮಿಯೊಬ್ಬ, ಯಶವಂತಪುರ ರೈಲು ನಿಲ್ದಾಣ ಮತ್ತು ಬಿಎಂಟಿಸಿ ಬಸ್ ನಿಲ್ದಾಣ ಮತ್ತು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿ ಪೋನ್ ಕಟ್ ಮಾಡಿದ್ದ. ನಿಯಂತ್ರಣ ಕೊಠಡಿಯಿಂದ ವಿಷಯ ತಿಳಿದ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ಮತ್ತು ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದರು. ಯಾವುದೇ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ವಾಪಸಾದರು.

ಆದರೆ, ಕೆಲ ಹೊತ್ತಿನ ಬಳಿಕ ಬಸ್ ನಿಲ್ದಾಣದ ನೆಲಮಂಗಲದ ಫ್ಲಾಟ್ ಫಾರಂ ಕಂಬದ ಬಳಿ ಬಾಕ್ಸ್ ವೊಂದು ಪತ್ತೆಯಾಗಿತ್ತು. ನಿಲ್ದಾಣ ಸ್ವಚ್ಛಗೊಳಿಸುವ ಸಿಬ್ಬಂದಿ ಬಾಕ್ಸ್ ಗಮನಿಸಿ ಮಹಿಳೆಯರ ಶೌಚಾಗೃಹದ ಬಳಿ ಇರಿಸಿ ಅಕ್ಕಪಕ್ಕದವರಿಗೆ ವಿಚಾರಿಸಿದ್ದಾರೆ. ಅದರ ಮೇಲೆ ಬಾಂಬ್ ಎಂದು ಬರೆದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ವಾಪಸ್ ಬಸ್ ನಿಲ್ದಾಣಕ್ಕೆ ಬಂದ ಬಾಂಬ್ ನಿಷ್ಕ್ರಿಯ ಮತ್ತು ಶ್ವಾನದಳ ಸಿಬ್ಬಂದಿ ಪರಿಶೀಲಿಸಿದಾಗ ಅದು ಖಾಲಿ ಬಾಕ್ಸ್ ಎಂಬುದು ಖಚಿತವಾಗಿದೆ. ಯಶವಂತಪುರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com