ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆಗೂ ಮುನ್ನ ಬಿಜೆಪಿಗೆ ಮೊದಲ ಜಯ

ಬಿಬಿಎಂಪಿ ಚುನಾವಣೆಗೂ ಮುನ್ನ ಬಿಜೆಪಿಗೆ ಮೊದಲ ಜಯ
ಭಾರತಿ ರಾಮಚಂದ್ರ(ಸಂಗ್ರಹ ಚಿತ್ರ)
Published On :
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಆಗಸ್ಟ್ 22 ರಂದು ನಡೆಯಲಿದ್ದು, 25ಕ್ಕೆ ಫಲಿತಾಂಶ ಹೊರ ಬೀಳಲಿತ್ತು. ಆದರೆ ಚುನಾವಣೆಗೂ ಮುನ್ನ ಬಿಜೆಪಿಗೆ ಮೊದಲ ಜಯ ಸಿಕ್ಕಿದೆ. 
ಬೆಂಗಳೂರಿನ ಹೊಂಗಸಂದ್ರ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಭಾರತಿ ರಾಮಚಂದ್ರ ಎಂಬುವರು ಕಾರ್ಪೋರೇಟರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 11 ರಂದು ನಾಮಪತ್ರ ಪರಿಶೀಲನೆ ನಡೆದಿದ್ದು, ಕಾಂಗ್ರೆಸ್ ನ ಅಭ್ಯರ್ಥಿಯಾಗಿದ್ದ ಕೆ. ಮಹೇಶ್ವರಿ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿತ್ತು. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನೇ ಕಣಕ್ಕೀಳಿಸಿರಲಿಲ್ಲ. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಶಹೀನಾ ಹಾಗೂ ಶ್ವೇತ ಎಂಬುವರು ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿಯ ಭಾರತಿಯವರ ಎದುರು ಸ್ಪರ್ಧಿಸಲು ಯಾವುದೇ ಅಭ್ಯರ್ಥಿಗಳು ಇಲ್ಲದಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ಬಿಬಿಎಂಪಿಯ 198 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಬಿಜೆಪಿಗೆ ಮೊದಲ ಜಯ ಸಿಕ್ಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.