ಜಾಲಪ್ಪಗೆ ಅರಸು ಪ್ರಶಸ್ತಿ

ಮಾಜಿ ಸಚಿವ ಆರ್.ಎಲ್ ಜಾಲಪ್ಪ ಅವರನ್ನು 2015 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜಾಲಪ್ಪಗೆ ಮಾಜಿ ಸಿಎಂ ದೇವರಾಜ ಅರಸು ಪ್ರಶಸ್ತಿ
ಜಾಲಪ್ಪಗೆ ಮಾಜಿ ಸಿಎಂ ದೇವರಾಜ ಅರಸು ಪ್ರಶಸ್ತಿ

ಬೆಂಗಳೂರು: ಮಾಜಿ ಸಚಿವ ಆರ್.ಎಲ್ ಜಾಲಪ್ಪ ಅವರನ್ನು 2015 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಒ ಅನಂತರಾಮಯ್ಯ  ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿ ಜಾಲಪ್ಪ ಅವರ ಹೆಸರನ್ನು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ದೇವರಾಜ ಅರಸು ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ 20 ರಂದು ನಡೆಯಲಿದೆ. ಪ್ರಶಸ್ತಿ ರೂ 2 ಲಕ್ಷ ನಗದನ್ನು ಒಳಗೊಳ್ಳಲಿದ್ದು, ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.

ಆ.20 ರಂದು ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು ಎಂದರು.  

ಅರಸು ಲಾಂಛನ ಬಿಡುಗಡೆ


ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಶತಮಾನೋತ್ಸವ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ ಶ್ರೀನಿವಾಸ ಪ್ರಸಾದ್ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ದೇವರಾಜ ಅರಸು ಅವರ ಭಾವಚಿತ್ರದೊಂದಿಗೆ ಶತಮಾನೋತ್ಸವವನ್ನು ಬಿಬಿಂಬಿಸುವ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆ.19 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶತಮಾನೋತ್ಸವ ಗೀತೆಯ ಸಿಡಿ ಬಿಡುಗಡೆ ಆಗಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com