

ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್‍ಗೆ ಇನ್ನೊಮ್ಮೆ ಅಧಿಕಾರ ಕೊಡಿ ಬೆಂಗಳೂರಿನ ಗತ ವೈಭವವನ್ನು ಮರಳಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಲೋಕಸಭೆ ಕಾಂಗ್ರೆಸ್
ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾನ ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತ ನಾಡಿದ ಅವರು, ಎಸ್.ಎಂ. ಕೃಷ್ಣ ಅವರು ಸಿಎಂ ಆಗಿದ್ದಾಗ ನಾವೆಲ್ಲರೂ ತಂಡವಾಗಿ ಕೆಲಸ ಮಾಡಿದ್ದರಿಂದ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂಬ ಹೆಸರು ಬಂತು. ಐಟಿ, ಬಿಟಿ ಕಂಪನಿಗಳು ಬೆಂಗಳೂರಿಗೆ ಬಂದವು.
ವಿದೇಶಿ ಬಂಡವಾಳ ಹೂಡಿಕೆ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ, ಕಳೆದ 8 ವರ್ಷದಲ್ಲಿ ಬಿಬಿಎಂಪಿಯಲ್ಲಿ ಅಧಿಕಾರ ನಡೆಸಿದವರು ಇದೆಲ್ಲದಕ್ಕೂ ಮಸಿ ಬಳಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.