

ಬೆಂಗಳೂರು: ಬೃಹತ್ ಬೆಂಗಳೂರು ಮಹಾನರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿನ ವಿದ್ಯುನ್ಮಾನ ಮತಯಂತ್ರ ನೋಟಾ ಗುಂಡಿಯನ್ನು ಅಳವಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕೆಂದು ಕೋರಿ ದಾಖಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪಾಲಿಕೆ ಚುನಾವಣೆಯಲ್ಲಿ ನೋಟಾ ಗುಂಡಿಯನ್ನು ಮತಯಂತ್ರದಲ್ಲಿ ಅಳವಡಿಸುವಂತೆ ರಾಜ್ಯ ಚುನಾವಣೆ ಆಯೋಗಕ್ಕೆ ನಿರ್ದೇಶಿಸಬೇಕೆಂದು ಕೊರತಿ ವಕೀಲ ಅಮೃತೇಶ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.
ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್ ಕೆ ಮುಖರ್ಜಿ ಮತ್ತು ನ್ಯಾ.ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಆ.22 ರಂದು ಚುನಾವಣೆ ದಿನಾಂಕ ಪ್ರಕಟವಾಗಿರುವುದರಿಂದ ತಡೆ ಸೂಕ್ತವಲ್ಲ ಎಂದು ಅರ್ಜಿ ವಜಾಗೊಳಿಸಿ ಆದೇಶಿಸಿದೆ.