

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರು ಹಾಗೂ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ವಿದ್ಯುತ್ ಲೋಡ್‍ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವ ಶಿವಕುಮಾರ್ ಭರವಸೆ ನೀಡಿದ್ದಾರೆ. ಜಿಲ್ಲೆಯ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾಗಿರುವ ಎಂ.ಬಿ.ಪಾಟೀಲ ಅವರು ವಿಜಯಪುರ ಜಿಲ್ಲೆಯ ಶಾಸಕರೊಂ ದಿಗೆ ಇಂಧನ ಸಚಿವರ ನಿವಾಸದಲ್ಲಿ ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ. ಕುಡಿಯುವ ನೀರು ಹಾಗೂ ರೈತರ ಕೊಳವೆಬಾವಿಗಳಿಗೆ ತೊಂದರೆ ಆಗದಂತೆ ನಿತ್ಯ4 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸುವುದರ ಜತೆಗೆ ಲೋಡ್‍ಶೆಡ್ಡಿಂಗ್ ಅನ್ನು ಎಲ್ಲಾ ಜಿಲ್ಲೆಗಳಲ್ಲೂಏಕರೂಪದಲ್ಲಿ ಅನುಸರಿಸಲಾಗುವುದು ಎಂದರು. ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ತೀವ್ರಗೊಂಡು ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ, ಮಳೆ ಇಲ್ಲದ ಕಾರಣ ಯಾವ ಬೆಳೆಗಳನ್ನು ಈ ಮುಂಗಾರು ಹಂಗಾಮಿನಲ್ಲಿ ಬೆಳೆಯಲು ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿರುವತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳುವು ದಕ್ಕಾದರೂ ಕೊಳವೆಬಾವಿಗಳಿಂದ ರೈತರು ನೀರು ಪೂರೈಸಲು ತ್ರಿಫೇಸ್ ವಿದ್ಯುತ್ ಪೂರೈಸಬೇಕುಹಾಗೂ ಲೋಡ್‍ಶೆಡ್ಡಿಂಗ್ ಅನ್ನು ಒಂದೇ ಜಿಲ್ಲೆಗೆ ಹೇರುವ ಬದಲಿಗೆ ಎಲ್ಲಾ ಜಿಲ್ಲೆಗಳಿಗೂ ಸಮಾನವಾಗಿ ಹಂಚಿಕೆ ಮಾಡಬೇಕೆಂದು ಸಚಿವ ಎಂ.ಬಿ.ಪಾಟೀಲ್ ಅವರು ಮಾಡಿಕೊಂಡ ಮನವಿಗೆ ತ್ರಿಫೇಸ್ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದರು.