ಜಿಲ್ಲಾ ಸುದ್ದಿ

ನ್ಯಾ.ಸುಧೀಂದ್ರ ರಾವ್ ಹೈಕೋರ್ಟ್ ರಿಜಿಸ್ಟ್ರಾರ್

ನ್ಯಾ.ಸುಧೀಂದ್ರ ರಾವ್ ಹೈಕೋರ್ಟ್ ರಿಜಿಸ್ಟ್ರಾರ್
ನ್ಯಾ. ಎನ್.ಕೆ. ಸುಧೀಂದ್ರ ರಾವ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಮಾಜಿ ಶಾಸಕ ವೈ.ಸಂಪಂಗಿ ಅವರನ್ನು
ಜೈಲಿಗೆ ಕಳುಹಿಸಿದ್ದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರನ್ನು ಹೈಕೋರ್ಟ್ ರಿಜಿಸ್ಟ್ರಾರ್(ನೇಮಕಾತಿ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ನ್ಯಾ. ಸುಧೀಂದ್ರ ರಾವ್ ಮತ್ತು ಕೆ.ನಟರಾಜನ್ ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇತರೆ 39ಮಂದಿ ಸಿವಿಲ್, ಸೆಷನ್ಸ್ ಹಾಗೂ ಜಿಲ್ಲಾ ನ್ಯಾಯಾಧೀಶರನ್ನು ವಿವಿಧೆಡೆಗೆ ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರು 2011ರ ಏಪ್ರಿಲ್‍ನಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ
ವರ್ಗಾವಣೆಯಾಗಿದ್ದರು. ಅಲ್ಲಿಂದ ಸತತ ಮೂರು ವರ್ಷಗಳ ಕಾಲ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದ್ದರು.

ನಂತರ 2014ರ ಏಪ್ರಿಲ್ 23ರಂದು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನಾಗಿ ವರ್ಗಾವಣೆಗೊಂಡಿದ್ದರು. ಒಂದು ವರ್ಷ ನಾಲ್ಕು ತಿಂಗಳ ನಂತರ ಇದೀಗ ಹೈಕೋರ್ಟ್ ರಿಜಿಸ್ಟ್ರಾರ್ (ನೇಮಕಾತಿ ವಿಭಾಗ)ಕ್ಕೆ ವರ್ಗಾವಣೆಯಾಗಿದ್ದಾರೆ. ಈ ಹುದ್ದೆಯಲ್ಲಿದ್ದ ಕೆ. ನಟರಾಜನ್ (ಜಿಲ್ಲಾ ನ್ಯಾಯಾಧೀಶ) ಅವರನ್ನು ರಾಜ್ಯ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.

ಪ್ರಮುಖ ತೀರ್ಪುಗಳ ಕರ್ತೃ: ನ್ಯಾ. ಎನ್.ಕೆ. ಸುಧೀಂದ್ರ ರಾವ್ ಅವರು ಲೋಕಾಯಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ವೇಳೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ  ಕಟ್ಟಾ ಸುಬ್ರಮಣ್ಯ ನಾಯ್ಡು, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಶಾಸಕರಾಗಿದ್ದ ವೈ.ಸಂಪಂಗಿ, ಬಿಬಿಎಂಪಿ ಮಾಜಿ ಸದಸ್ಯರಾದ ಕಟ್ಟಾ ಜಗದೀಶ್, ಗೋವಿಂದರಾಜು, ಕುಮಾರಿ ಅವ್ವಾಯಿ ಮತ್ತಿತರರನ್ನು ಜೈಲಿಗೆ ಕಳುಹಿಸಿದ್ದರು.

ನ್ಯಾ. ಸುಧೀಂದ್ರ ರಾವ್ ಮತ್ತು ಕೆ.ನಟರಾಜನ್ ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇತರೆ 39ಮಂದಿ ಸಿವಿಲ್, ಸೆಷನ್ಸ್ ಹಾಗೂ ಜಿಲ್ಲಾ ನ್ಯಾಯಾಧೀಶರನ್ನು ವಿವಿಧೆಡೆಗೆ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.