
ಬೆಂಗಳೂರು: ಈ ಬಾರಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಒಂದೊಮ್ಮೆ ನಿರೀಕ್ಷಿತ ಸ್ಥಾನಗಳ ಕೊರತೆಯಾದರೆ ಪಕ್ಷೇತರರ ಬೆಂಬಲ ಪಡೆಯಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.
ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಜತೆ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವು ನೂರಕ್ಕೆ ನೂರರಷ್ಟು ಬಹುಮತ ಪಡೆಯುತ್ತೇವೆ. ಒಂದೊಮ್ಮೆ ಒಂದೆರಡು ಸ್ಥಾನಗಳ ಕೊರತೆಯಾದರೆ ಪಕ್ಷೇತರರ ಸಹಾಯ ಪಡೆಯಲಾಗುವುದು ಎಂದರು.
ಹೈಕಮಾಂಡ್ ನಿರ್ಧಾರ: ರಾಜ್ಯ ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಸರಿಯಾಗಿ ಕೆಲಸ ಮಾಡದೇ ಇರುವ ಸಚಿವರನ್ನು ಸಂಪುಟದಿಂದ ಕೈ ಬಿಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.
Advertisement