ಜಿಲ್ಲಾ ಸುದ್ದಿ

ಎರಡು ಕಡೆ ಲೈಂಗಿಕ ದೌರ್ಜನ್ಯ, ಒಬ್ಬನ ಬಂಧನ

ಎರಡು ಕಡೆ ಲೈಂಗಿಕ ದೌರ್ಜನ್ಯ, ಒಬ್ಬನ ಬಂಧನ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಏಳು ವರ್ಷದ ಬಾಲಕಿಗೆ ನೆರೆಮನೆಯ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಂದಿನಿ ಲೇಔಟ್‍ನಲ್ಲಿ ನಡೆದಿದ್ದು ಬುಧವಾರ ಬೆಳಕಿಗೆ ಬಂದಿದೆ. ಬಾಲಕಿ ಪಾಲಕರು ನೀಡಿದ ದೂರಿನ ಆಧಾರದ ಮೇಲೆ ನಂದಿನಿ ಲೇಔಟ್ ನಿವಾಸಿ ಆರೋಪಿ ರಾಮು(60) ಎಂಬಾತನನ್ನು ಗುರುವಾರ ಬಂಧಿಸಲಾಗಿದೆ.

ದೌರ್ಜನ್ಯಕ್ಕೊಳಗಾದ ಬಾಲಕಿ ಹಾಗೂ ಆರೋಪಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಆಗಸ್ಟ್ 21ರಂದು ಬಾಲಕಿ ಮನೆಯಲ್ಲಿ ಒಂಟಿಯಾಗಿ ದ್ದಾಗ ಮನೆಯೊಳಗೆ ನುಗ್ಗಿದ ಆರೋಪಿ ರಾಮು, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರ ವನ್ನು ಯಾರಿಗೂ ಹೇಳಬೇಡ ಎಂದು ಹೆದ ರಿಸಿದ್ದ. ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಮತ್ತೊಂದು ಪ್ರಕರಣ: ಕೆ.ಆರ್ ಪುರದಲ್ಲಿ 8 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ದುಷ್ಕರ್ಮಿ ವೆಂಕಟರಮಣ (30) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಆಕೆಯ ತಂದೆ-ತಾಯಿ ಗಾರ್ಮೆಂಟ್ಸ್ ನೌಕರರು. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆಮಿಷ ಒಡ್ಡಿ ಉದ್ಯಾನದೊಳಗೆ ಕರೆದೊಯ್ದು ವಿವಸuಉಗೊಳಿಸಿದ್ದ. ಈ ವೇಳೆ ಬಾಲಕಿ ಕಿರುಚಾಡಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕೆ.ಆರ್. ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.