ಮತ್ತೆ ಮಹಿಳೆಯರಿಬ್ಬರ ಸರ ಅಪಹರಣ

ನಗರದ ಪ್ರತ್ಯೇಕ ಕಡೆ ಇಬ್ಬರು ಮಹಿಳೆಯರಿಂದ ದುಷ್ಕರ್ಮಿಗಳು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮಹಾಲಕ್ಷ್ಮೀ ಬಡಾವಣೆಯಲ್ಲಿ ಪತ್ರಿಯೊಂದಿಗೆ ಮನೆಗೆ ನಡೆದು ಹೋಗುತ್ತಿದ್ದ ಆಶ್ಲೇಷಾ(31) ಎಂಬುವರ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ನಗರದ ಪ್ರತ್ಯೇಕ ಕಡೆ ಇಬ್ಬರು ಮಹಿಳೆಯರಿಂದ ದುಷ್ಕರ್ಮಿಗಳು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮಹಾಲಕ್ಷ್ಮೀ ಬಡಾವಣೆಯಲ್ಲಿ ಪತ್ರಿಯೊಂದಿಗೆ ಮನೆಗೆ ನಡೆದು ಹೋಗುತ್ತಿದ್ದ ಆಶ್ಲೇಷಾ(31) ಎಂಬುವರ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಇಲ್ಲಿನ ನಿವಾಸಿಯಾಗಿರುವ ಆಶ್ಲೇಷಾ ಅವರು ಬಸವೇಶ್ವರ ನಗರದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಪತಿಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದರು.

ರಾತ್ರಿ 10.30ರ ಸುಮಾರಿಗೆ ಮನೆ ಹತ್ತಿರ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 48 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮೈಕೋ ಬಡಾವಣೆ ವಿಜಯಾ ಬ್ಯಾಂಕ್ ಲೇಔಟ್‍ನಲ್ಲಿ ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ವೃದ್ಧೆ ಬೃಂದಾವತಿ (60) ಎಂಬುವರಿಂದ ದುಷ್ಕರ್ಮಿಗಳಿಬ್ಬರು 50 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮೈಕೋ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com