ಜಿಲ್ಲಾ ಸುದ್ದಿ

ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರ

ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದು ಸಂಪುಟ ಪುನಾರಚನೆ ಪ್ರಕ್ರಿಯೆ ಹಿಂದಕ್ಕೆ ತಳ್ಳಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿ...

ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದು ಸಂಪುಟ ಪುನಾರಚನೆ ಪ್ರಕ್ರಿಯೆ ಹಿಂದಕ್ಕೆ ತಳ್ಳಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿ ರಾಜ್ಯಕ್ಕೆ ರಾಹುಲ್
ಗಾಂಧಿ ಆಗಮನದ ಬಳಿಕ ವಿಸ್ತರಣೆ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಪೈಕಿ ಯಾವುದಕ್ಕೆ ಮುಂದಾದರೂ ಜೇನುಗೂಡಿಗೆ ಕೈ ಹಾಕಿದ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಕಾಂಕ್ಷಿಗಳು ಮತ್ತು ಅತೃಪ್ತರ ಬಳಗ ಹೆಚ್ಚಿರುವುದೇ ಇದಕ್ಕೆ ಕಾರಣ. ಹಾಗಂತ ಸುಮ್ಮನೇ ಕುಳಿತರೆ ಅದು ಇನ್ನಷ್ಟು ಅಡ್ಡಪರಿಣಾಮ ಸೃಷ್ಟಿಸುತ್ತದೆ.

ಹೀಗಾಗಿ ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕಾಲಿಗೆ ಚೆಂಡು, ಕೊರಳಿಗೆ ಗುಂಡು ಕಟ್ಟಿಕೊಂಡಂತಾಗಿದ್ದು, ಇನ್ನಷ್ಟು ಕಾಲ ಹರಣದ ಪ್ರಯತ್ನಕ್ಕೆ ಮುಂದಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯಕ್ಕೆ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಜಾತಿ, ಪ್ರದೇಶ ಹಾಗೂ ಹಿರಿತನದ ಆಧಾರದ ಮೇಲೆ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದಾರೆ.

ಇವರೆಲ್ಲರ ಮೂಗಿಗೂ ತುಪ್ಪ ಸುರಿದು ಖುರ್ಚಿ ಭದ್ರಪಡಿಸಿ-ಕೊಳ್ಳಬೇಕಿದ್ದರೆ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆಗೆ ಕೈ ಹಾಕಬೇಕು. ಆಗ ಅಧಿಕಾರ ಕಳೆದುಕೊಂಡವರ ಕೋಪ ಎದುರಿಸಬೇಕಾಗುತ್ತದೆ. ಹೀಗಾಗಿ ಸರ್ಕಾರಕ್ಕೆ ಮೂರು ವರ್ಷ ತುಂಬುವವರೆಗೆ ಸಂಪುಟ ಪುನಾರಚನೆ ಕಸರತ್ತಿಗೆ ಕೈ ಹಾಕದಿರುವುದೇ ಕ್ಷೇಮ ಎಂಬ ತೀರ್ಮಾನಕ್ಕೆ ಸಿಎಂ ಸಿದ್ದರಾಮಯ್ಯ ಬಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.