ರಾಜ್ಯದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪ್ರೋತ್ಸಾಹ

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಜಗತ್ತಿನ ವಿವಿಧ ಕಂಪೆನಿಗಳನ್ನು ಬಂಡವಾಳ ಹೂಡಿಕೆಗೆ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Updated on

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಜಗತ್ತಿನ ವಿವಿಧ ಕಂಪೆನಿಗಳನ್ನು ಬಂಡವಾಳ ಹೂಡಿಕೆಗೆ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಾಷ್ ಕಂಪೆನಿಯ ಘಟಕವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಯೋಜನೆಗಳ ಮೂಲಕ ಕೈಗಾರಿಕೆಗಳ
ಬೆಳವಣಿಗೆಗೆ ಸಹಕಾರ ನೀಡಲಾಗುತ್ತಿ ದೆ. ಇದಕ್ಕಾಗಿ ನವೆಂಬರ್‍ನಲ್ಲಿ `ಇನ್ವೆಸ್ಟ್ ಕರ್ನಾಟಕ' ಸಮಾವೇಶಕ್ಕೆ ವಿಶ್ವದ ಹೂಡಿಕೆದಾರರನ್ನು ಸ್ವಾಗತಿಸಲಾಗುತ್ತಿದೆ. ಹೂಡಿಕೆದಾರರಿಗೆ ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಾಯುಮಾಲಿನ್ಯ ಕಡಿತಕ್ಕೆ ಸಹಕಾರಿ: ಹೊಸ ಹೈಟೆಕ್ ಘಟಕ ನಗರ ಪ್ರದೇಶದಲ್ಲಿನ ವಾಯುಮಾಲಿನ್ಯ ಕಡಿಮೆ ಮಾಡಲು ಸಹಕಾರಿ. ಬಾಷ್ ಕಂಪನಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಪ್ರಧಾನ ಕೈಗಾರಿಕೆಗಳಲ್ಲಿ ಒಂದಾಗಲಿದೆ ಎಂಬ ಭರವಸೆಯನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. ಬಾಷ್ ಇಂಡಿಯಾ ಗ್ರೂಪ್ ಅಧ್ಯಕ್ಷ ಡಾ. ಸ್ಟೀಫನ್ ಬರ್ನ್ ಮಾತನಾಡಿ, ದೇಶದಲ್ಲಿ 14ನೇ ಮತ್ತು ರಾಜ್ಯದಲ್ಲಿ 5ನೇ ಘಟಕ ಇದಾಗಿದೆ. ಬಿಡದಿ ಘಟಕ ಎರಡು ಹಂತಗಳಲ್ಲಿ ನಿರ್ಮಾಣವಾಗುತ್ತಿದ್ದು, 2ನೇ ಘಟಕ 2018ರಲ್ಲಿ ಪ್ರಾರಂಭಗೊಳ್ಳಲಿದೆ.

ಸದ್ಯ ಇಲ್ಲಿ ಮೂರು ಸಾವಿರ ಕಾರ್ಮಿಕರಿದ್ದು, ರು.374 ಕೋಟಿ ಹೂಡಿಕೆ ಮಾಡಲಾಗಿದೆ. ಡೀಸೆಲ್ ಸಿಸ್ಟಂಗಳಿಗೆ ಬೇಕಾಗುವ ಉತ್ಪನ್ನಗಳನ್ನು ಮತ್ತು ಹೊಸ ಮೊಬಿಲಿಟಿ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಜತೆ ಉತ್ತಮ ಒಡನಾಟವಿದ್ದು, ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ತಿಳಿಸಿದರು. ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ಕೈಗಾರಿಕೆ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರತ್ನಪ್ರಭ, ಕಂಪನಿ ನಿರ್ದೇಶಕ ಪೀಟರ್ ಟೈರೋಲರ್ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com