ರಾಷ್ಟ್ರೀಯ ಹೆದ್ದಾರಿ: ಐದು ಪಟ್ಟಣಗಳಿಗೆ ಬೈಪಾಸ್

ಚಾಮರಾಜನಗರದಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (150ಎ)ಯನ್ನು ಅಷ್ಠಪಥಗಳ ಸುವರ್ಣ ಪಥವನ್ನಾಗಿ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಐದು ಪ್ರಮುಖ ಪಟ್ಟಣಗಳಿಗೆ ಬೈಪಾಸ್ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಚಾಮರಾಜನಗರದಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (150ಎ)ಯನ್ನು ಅಷ್ಠಪಥಗಳ ಸುವರ್ಣ ಪಥವನ್ನಾಗಿ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಐದು ಪ್ರಮುಖ ಪಟ್ಟಣಗಳಿಗೆ ಬೈಪಾಸ್ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ವಾಣಿಜ್ಯ ಮಾರ್ಗವಾಗಿರುವ ಚಾಮರಾಜ ನಗರ ಜೇವರ್ಗಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಂಜನಗೂಡು, ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ ಹಾಗೂ ಚಿಕ್ಕನಾಯಕನಹಳ್ಳಿ ಪಟ್ಟಣಗಳಿಗೆ ಬೈಪಾಸ್ ರಸ್ತೆ ನಿರ್ಮಿಸಲು ಲೋಕೋಪಯೋಗಿ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಸಭೆ ಒಪ್ಪಿಗೆ ನೀಡಿದೆ.

ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ತುಮಕೂರು ಜಿಲ್ಲೆಯ ಜನಪ್ರತಿ ನಿಧಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಭಾಗದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದ ಭೆಯಲ್ಲಿ ಬೈಪಾಸ್ ರಸ್ತೆಯ ಮಾರ್ಗದ ಕುರಿತಂತೆ ಸುದೀರ್ಘವಾಗಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಯಿತು. ಪಾಂಡವಪುರ ಬೈಪಾಸ್ ಕುರಿತಂತೆ ಮಂಡ್ಯದಲ್ಲಿ ಶೀಘ್ರ ಮತ್ತೊಂದು ಸಭೆಯನ್ನೂ ನಡೆಸಲು ನಿರ್ಧರಿಸಲಾಯಿತು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ನಡೆಸುವಾಗ ಆಯಾ ಜಿಲ್ಲೆಗಳ ಸ್ಥಳೀಯ ಎಲ್ಲ ಜನಪ್ರತಿನಿಧಿಗಳಿಂದ ಸಲಹೆ ಪಡೆದು, ಜನರಿಂದ ಹೆಚ್ಚು ವಿರೋಧ ಬಾರದಂತೆ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸಚಿವ ಡಾ. ಎಚ್.ಸಿ.ಮಹದೇವಪ್ಪ ಸೂಚನೆ ನೀಡಿದರು. ಕಾನೂನು ಸಚಿವ ಟಿ.ಬಿ.ಜಯಚಂದ್ರ, ಮಂಡ್ಯ ಸಂಸದ ಪುಟ್ಟರಾಜು, ಶಾಸಕರಾದ ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಸುರೇಶ್‍ಬಾಬು, ಎಂ.ಟಿ.ಕೃಷ್ಣಪ್ಪ, ಎಂ.ಡಿ.ಲಕ್ಷ್ಮೀನಾರಾಯಣ ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com