ವರಿಷ್ಠರ ತೀರ್ಮಾನಕ್ಕೆ ಬದ್ಧ: ಡಿಕೆಶಿ

ಬಿಬಿಎಂಪಿ ಗದ್ದುಗೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಂಗ್ರೆಸ್ ಮುಖಂಡ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ...
ಇಂಧನ ಸಚಿವ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
ಇಂಧನ ಸಚಿವ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
Updated on: 

ಮಂಗಳೂರು: ಬಿಬಿಎಂಪಿ ಗದ್ದುಗೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಂಗ್ರೆಸ್ ಮುಖಂಡ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಧಿಕಾರ ಪಡೆಯುವುದು, ಬಿಡುವುದು ಮುಖ್ಯ ಅಲ್ಲ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಭವಿಷ್ಯದ ದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಮತ್ತು ಜನರಿಗೆ ಸ್ಪಷ್ಟ ಸಂದೇಶ ನೀಡಬೇಕಾಗಿದೆ ಎಂದು ಶನಿವಾರ ಮಂಗಳೂರಲ್ಲಿ ಸುದ್ದಿಗಾರರಲ್ಲಿ ಅಭಿಪ್ರಾಯಪಟ್ಟರು.

ಮೈತ್ರಿ ಬಗ್ಗೆ ಮಾಧ್ಯಮಗಳು ಇಲ್ಲಸಲ್ಲದ ಗೊಂದಲ ಸೃಷ್ಟಿಸುತ್ತಿದೆ. ಇದುವರೆಗೆ ನನ್ನ ಜೊತೆ ಯಾರೂ ಮೈತ್ರಿ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಮಂಗಳೂರು ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ಪ್ರಯಾಣಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com