ಕಲ್ಬುರ್ಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಸಾಹಿತಿ, ಸಂಶೋಧಕ ಎಂ ಎಂ ಕಲಬುರ್ಗಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಕಲ್ಬುರ್ಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಕಲ್ಬುರ್ಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಧಾರವಾಡ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಹಿರಿಯ ಸಾಹಿತಿ, ಸಂಶೋಧಕ ಎಂ ಎಂ ಕಲಬುರ್ಗಿ ಅವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,  ಗೃಹ ಸಚಿವ ಕೆ.ಜೆ ಜಾರ್ಜ್, ಸಚಿವ ಹೆಚ್.ಕೆ ಪಾಟೀಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಕರ್ನಾಟಕ ಕಾಲೇಜು ಆವರಣದಲ್ಲಿ ಕಲ್ಬುರ್ಗಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ರಾಜಕಾರಣಿಗಳು, ವಿವಿಧ ಮಠಾಧೀಶರು, ಸಾರ್ವಜನಿಕರು ಅಂತಿಮ ದರ್ಶನ ಪಡೆದಿದ್ದಾರೆ. ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಲ್ಬುರ್ಗಿ ಅವರ ಹತ್ಯೆಯ ಪ್ರಕರಣವನ್ನು ಸಿಬಿಐ, ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಸೂಕ್ತ ಚರ್ಚೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಳೆದ ವರ್ಷದಿಂದ ಕಲ್ಬುರ್ಗಿ ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಆದರೆ ಸ್ವತಃ ಕಲ್ಬುರ್ಗಿ ಅವರೇ ಭದ್ರತೆಯನ್ನು ನಿರಕಾರಿಸಿದ್ದರು. ಭದ್ರತೆ ಮುಂದುವರೆಸಿದ್ದರೆ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಿಗ್ಗೆ 8.40ಕ್ಕೆ ಸುಮಾರಿನಲ್ಲಿ ದುಷ್ಕರ್ಮಿಗಳು ಏಕಾಏಕಿ ಕಲಬುರ್ಗಿ ಅವರ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com