ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತೆ ಖಾತ್ರಿ ಪಡಿಸಿ: ಹೈಕೋರ್ಟ್

ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಂದ ಜನರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ರಾಜ್ಯ ಸರ್ಕಾರ ಅಗ್ನಿ ಸುರಕ್ಷತಾ ಕ್ರಮಗಳ ಕುರಿತು 2012 ಜುಲೈ 7ರಂದು ಹೊರಡಿಸಿದ ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ...
ಕರ್ನಾಟಕ ಹೈ ಕೋರ್ಟ್ (ಸಂಗ್ರಹ ಚಿತ್ರ)
ಕರ್ನಾಟಕ ಹೈ ಕೋರ್ಟ್ (ಸಂಗ್ರಹ ಚಿತ್ರ)

ಬೆಂಗಳೂರು: ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಂದ ಜನರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ರಾಜ್ಯ ಸರ್ಕಾರ ಅಗ್ನಿ ಸುರಕ್ಷತಾ ಕ್ರಮಗಳ ಕುರಿತು 2012 ಜುಲೈ 7ರಂದು ಹೊರಡಿಸಿದ ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸರ್ಕಾರ, ಬಿಬಿಎಂಪಿ, ಬಿಡಿಎ, ಜಲಮಂಡಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಕಾರ್ಲ್ಟನ್ ದುರಂತದಿಂದ ಎಚ್ಚೆತ್ತ ಸರ್ಕಾರ ಬಹುಮಹಡಿ ಕಟ್ಟಡಗಳು ಅಗ್ನಿ ಮತ್ತು ತುರ್ತು ಸೇವೆಗಳ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಆದೇಶಿಸಿತ್ತು. ಜತೆಗೆ, ಆ ಸಂಬಂಧ ಅಧಿಸೂಚನೆ ಹೊರಡಿಸಿ ಅಗ್ನಿ ಹಾಗೂ ತುರ್ತುಸೇವೆಗಳ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ನಗರದ ಬಹುಮಹಡಿಗಳಲ್ಲಿ ಈ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬಿಯಾಂಡ್ ಕಾಲ್ರ್ಟನ್ ಟವರ್ ಸಂಸ್ಥೆ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಸರ್ಕಾರ, ಅಗ್ನಿ ಮತ್ತು ತುರ್ತು ಸೇವೆಗಳ ಇಲಾಖೆ, ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಪ್ರತಿವಾದಿ ಮಾಡಲಾಗಿತ್ತು.

ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂತಿರ್  ಎಸ್.ಕೆ. ಮುಖರ್ಜಿ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ 2011ರ ಜುಲೈ 7ರಂದು
ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಅಗ್ನಿ ಸುರಕ್ಷಿತ ಮಾರ್ಗಗಳನ್ನು ನಗರದಲ್ಲಿ ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com