ಜಿಲ್ಲಾ ಸುದ್ದಿ

9 ರಿಂದ ಬೃಹತ್ ಹಿಂದೂ ಆಧ್ಯಾತ್ಮಿಕ ಸೇವಾ ಮೇಳ

9 ರಿಂದ ಬೃಹತ್ ಹಿಂದೂ ಆಧ್ಯಾತ್ಮಿಕ ಸೇವಾ ಮೇಳ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಹಿಂದು ಸ್ಪಿರಿಚ್ಯುವಲ್ ಆ್ಯಂಡ್ ಸರ್ವಿಸಸ್ ಫೌಂಡೇಷನ್‍ನಿಂದ ಡಿ.9ರಿಂದ 13ರವರೆಗೆ ಬೃಹತ್ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳವನ್ನು 300ಕ್ಕೂ ಹೆಚ್ಚು ಸಂಸ್ಥೆಗಳ ಸಹಯೋಗದಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರತಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹಿಂದೂ ಸೇವಾ ಪ್ರತಿಷ್ಠಾನದ ವ್ಯವಸ್ಥಾಪಕ ಧರ್ಮದರ್ಶಿ ಶ್ರೀಧರ್ ಸಾಗರ್, ಡಿ.9ರಂದು ಸಂಜೆ 5.15ಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಕಾರ್ಯಕ್ರಮ ಉದ್ಘಾಟಿಸುವರು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನ ಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸ್ವರ್ಣ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸುವರು. ಚಿಂತಕ ಎಸ್.ಗುರುಮೂರ್ತಿ ಭಾಷಣ ಮಾಡಲಿದ್ದಾರೆ ಎಂದರು.

ಅಂದು ಮಧ್ಯಾಹ್ನ 2ರಿಂದ 3 ಗಂಟೆವರೆಗೆ ಮಾತೃವಂದನಕಾರ್ಯಕ್ರಮದಲ್ಲಿ ಕನಕಗಿರಿ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಕಲಬುರ್ಗಿಯ ಬುದ್ಧವಿಹಾರದ ಸಂಗಾನಂದ ಬಂತೆ, ಚಿತ್ರದುರ್ಗದ ಮಾದಾರ ಚೆನ್ನಯ್ಯ, ಇಸ್ಕಾನ್‍ನ ಅಧ್ಯಕ್ಷ ಮಧುಪಂಡಿತ ದಾಸ್, ಗುರುದ್ವಾರದ ಮುಖ್ಯಗ್ರಂಥಿ ಜ್ಞಾನಿ ಬಲದೇವ, ಕೆರೂರಿನ ಶಾರದಾ ನಿಕೇತನದ ಯತೀಶ್ವರಿ ನೀಲಕಂಠಪ್ರಿಯ ಅವರು ದಿವ್ಯ ಸಾನ್ನಿಧ್ಯ ವಹಿಸುವರು. ನಂತರ ಸಂಜೆ 7ರಿಂದ 8 ಗಂಟೆವರೆಗೆ ಸ್ನೇಹ ಕಪ್ಪಣ್ಣ ಮತ್ತು ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸಂಚಾಲಕ ಅರಕಲಿ ವೆಂಕಟೇಶ್ ಮಾತನಾಡಿ, ಡಿ.10ರಂದು ಬೆಳಗ್ಗೆ 11ರಿಂದ ಗುರುವಂದನಾ ಕಾರ್ಯಕ್ರಮ, ಡಿ.11ರಂದು ಬೆಳಗ್ಗೆ 11ರಿಂದ ಗೋಗಂಗಾವಂದನ ಕಾರ್ಯಕ್ರಮ ನಡೆದರೆ, ಡಿ.12ರಂದು ಬೆಳಗ್ಗೆ 11ರಿಂದ ಪ್ರಕೃತಿ ವಂದನಾ ಕಾರ್ಯಕ್ರಮ, ಡಿ.13ರಂದು 11ರಿಂದ 12.30 ವರೆಗೆ ಪರಮವೀರ ವಂದನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.