
ಸುಬ್ರಹ್ಮಣ್ಯ: ಸಹಕಾರಿ ಸಂಘಗಳಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ರೈತರು ಅಸಲು ಕಟ್ಟಿದಲ್ಲಿ ಅವರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಮುಂದಾಗಿದೆ ಎಂದು ಸಹಕಾರ ಮತ್ತು ಸಕ್ಕರೆ ಇಲಾಖೆ ಸಚಿವ ಮಹಾದೇವ ಪ್ರಸಾದ್ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದ 136 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಸಂಕಷ್ಟ ನಿವಾರಣೆಗೆ ಮುಂದಾಗಿದೆ. ಮಧ್ಯಮಾವಧಿಮತ್ತು ದೀರ್ಘಾವ ಧಿಸಾಲಗಳ ಕಂತು ಮರುಪಾವತಿಯನ್ನು ಒಂದು ವರ್ಷದವರೆಗೆ ಮುಂದೂಡಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ 78 ಲಕ್ಷ ಕೃಷಿ ಭೂಹಿಡುವಳಿದಾರರಿದ್ದಾರೆ. ಅದರಲ್ಲಿ 21 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ರೂಪುರೇಷೆ ಸಿದ್ಧವಾಗುತ್ತಿದೆ. ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶೂನ್ಯ ಬಡ್ಡಿದರ ದಲ್ಲಿ ರು.50 ಸಾವಿರದ ವರೆಗೆ ರೈತರಿಗೆ ಸಾಲ ವಿತರಿಸಲಾಗುವುದು ಎಂದು ತಿಳಿಸಿದರು.
Advertisement