
ಬೀದರ್: ನಿಂತಿದ್ದ ಲಾರಿಗೆ ಜೀಪ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ನಡೆದಿದೆ.
ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಜೀಪಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ರಾಜೇಶ್ವರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Advertisement