ಆತ್ಮಹತ್ಯೆಗೆ ಬೇರೆಯವರು ಹೊಣೆಯಲ್ಲ: ಹೈ ಕೋರ್ಟ್

ಮಾನಸಿಕವಾಗಿ ದುರ್ಬಲವಾಗಿರುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಲ್ಲಿ ಬೇರೆಯವರನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ...
ಹೈ ಕೋರ್ಟ್, ಕರ್ನಾಟಕ (ಸಂಗ್ರಹ ಚಿತ್ರ)
ಹೈ ಕೋರ್ಟ್, ಕರ್ನಾಟಕ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಮಾನಸಿಕವಾಗಿ ದುರ್ಬಲವಾಗಿರುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಲ್ಲಿ ಬೇರೆಯವರನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಆರೋಪದಲ್ಲಿ ಪತ್ನಿ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರಿದ್ದ ನ್ಯಾಯಪೀಠ ಈ ಪ್ರಕರಣ ರದ್ದುಗೊಳಿಸಿ ಆದೇಶಿಸಿದೆ.

ಪ್ರಕರಣವೇನು?:
ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಗೀತ ಮತ್ತು ಕುಮಾರ್ (ಇಬ್ಬರ ಹೆಸರನ್ನು ಬದಲಾಯಿಸಲಾಗಿದೆ) ನಡುವಿನ ಪರಿಚಯ ಪ್ರೇಮಕ್ಕೆ ತಿರುಗಿ, ಕುಟುಂಬಸ್ಥರ ಒಪ್ಪಿಗೆ ಮೇರೆಗೆ 2006ರ ಜೂನ್‍ನಲ್ಲಿ ವಿವಾಹವಾಗಿದ್ದರು. ಬಳಿಕ ಒಂದು ಮಗುವಿಗೆ ಜನ್ಮ ನೀಡಿದ ದಂಪತಿಯ ಸಂಸಾರದಲ್ಲಿ ಬಿರುಕು ಉಂಟಾಗಿ ವಿನಾಕಾರಣ ಜಗಳ ನಡೆಯುವುದು ಸಾಮಾನ್ಯವಾಗಿತ್ತು.

ಮುಂದುವರಿದ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿತು. ವಿಚ್ಛೇದನ ನೀಡುವಂತೆ ಕೌಟುಂಬಿಕ ನ್ಯಾಯಾಲಯದಲ್ಲೂ ಅರ್ಜಿ ಸಲ್ಲಿಸಲಾಗಿತ್ತು. ಈ ನಡುವೆ 2014ರ ಜೂನ್ 14ರಂದು ಬೆಳಗ್ಗೆ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸೊಸೆಯೇ ಕಾರಣ ಎಂದು ಕುಮಾರ್ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಪ್ರೀತಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ರದ್ದುಕೋರಿ ಸಂಗೀತಾ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com