ಅತಂತ್ರವಾಗಿದ್ದಾರೆ ಎಂದು ತಿಳಿಸಿದರು. ಈ ವಿಳಂಬ ನೀತಿ ವಿರೋಧಿಸಿ ಉನ್ನತ ಶಿಕ್ಷಣ ಇಲಾಖೆ ಆಯುಕ್ತರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಕೂಡಲೆ ಬೇಡಿಕೆಗೆ ಸ್ಪಂದಿಸದೇ ಹೋದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಂಚಾಲಕ ಪಿ.ಎಸ್. ಮಂಜೇ ಗೌಡ ಮಾತನಾಡಿ, ಅನುದಾನದ ಕೊರತೆಯಿಂದ ಸಮಾನ್ಯ ವರ್ಗ ಆಡಳಿತ ಮಂಡಳಿಗಳು ನಡೆಸುತ್ತಿರುವ ಕಾಲೇಜುಗಳಲ್ಲಿ ನೆಟ್, ಸ್ಲೆಟ್, ಪಿಎಚ್.ಡಿ ಅರ್ಹತೆಯನ್ನು ಪಡೆದ ಉಪನ್ಯಾಸಕರಿಗೆ ಅತ್ಯಂತ ಕಡಿಮೆ ವೇತನ ನೀಡ ಲಾಗುತ್ತಿದೆ. ಇದರ ಪರಿಣಾಮ ಉಪನ್ಯಾಸಕರು ಉದ್ಯೋಗತೊರೆಯುತ್ತಿದ್ದಾರೆಂದು ಆತಂಕ ವ್ಯಕ್ತಪಡಿಸಿದರು.