ಸ್ತ್ರೀಯರಿಗೆ ಕಾನೂನು ಅರಿವು ಅಗತ್ಯ

ಇತ್ತೀಚಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಬಳಕೆ ಕುರಿತು ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು 9ನೇ ಎಸಿಎಂಎಂ ನ್ಯಾಯಾಲಯದ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಬಳಕೆ ಕುರಿತು ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು 9ನೇ ಎಸಿಎಂಎಂ ನ್ಯಾಯಾಲಯದ ನ್ಯಾ.ವಿಜಯಾನಂದ ಅಭಿಪ್ರಾಯಪಟ್ಟರು.

ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಡಾ.ಪ್ರಭಾಕರ್ ಕೋರೆ ಕನ್ವೆನ್ಷನ್ ಸೆಂಟರ್‍ನಲ್ಲಿ ಗುರುವಾರ ಉದ್ಯೋಗಸ್ಥ ಮಹಿಳೆಯರ ಸಮಸ್ಯೆಗಳ ಕುರಿತು
ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ಶಶಿಕಲಾ ಯು.ಶೆಟ್ಟಿ ಮಾತನಾಡಿ, ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಸರ್ಕಾರ ರು.3 ಲಕ್ಷದವರೆಗೆ ಪರಿಹಾರ ನೀಡಲಾಗುವುದು. ನೊಂದ ಮಹಿಳೆಗೆ ವಾಸಿಸಲು ಸ್ಥಳಾವಕಾಶ, ಆರೋಗ್ಯ ಕಾಪಾಡಿಕೊಳ್ಳಲು ನೆರವು ಹಾಗೂ ಉಚಿತ ಕಾನೂನು ನೆರವುಒದಗಿಸಲಾಗುವುದು.

ಅಂತೆಯೇ  ಕೆ.ಸಿ.ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಚಿತ್ರನಟಿ ಸುಧಾರಾಣಿ, 3ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾ„ೀಶರಾದ ಲಾವಣ್ಯ, 5ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರಂಗೇಗೌಡ , ಉಪ ಪೊಲೀಸ್ ಆಯುಕ್ತ
ಟಿ.ಆರ್.ಸುರೇಶ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com