ಮದ್ಯ ಸೇವಿಸಿ ವಾಹನ ಚಲಾಯಿಸದಿರಿ

ನಗರ ಸಂಚಾರ ಪೊಲೀಸ್ ಇಲಾಖೆಯಿಂದ ಡಿ.12ರಿಂದ ಜ.5ವರೆಗೆ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಆಯುಕ್ತ ಡಾ ಎಂ.ಎ.ಸಲೀಂ ತಿಳಿಸಿದ್ದಾರೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಗರ ಸಂಚಾರ ಪೊಲೀಸ್ ಇಲಾಖೆಯಿಂದ ಡಿ.12ರಿಂದ ಜ.5ವರೆಗೆ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಆಯುಕ್ತ ಡಾ ಎಂ.ಎ.ಸಲೀಂ ತಿಳಿಸಿದ್ದಾರೆ.

ಬೆಂಗಳೂರು ನಗರ ಸಂಚಾರ ಪೊಲೀಸ್ ಇಲಾಖೆ ಶನಿವಾರ ಬ್ರಿಗೇಡ್ ರಸ್ತೆಯಲ್ಲಿ ಆಯೋಜಿಸಿದ್ದ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನದಲ್ಲಿ
ಮಾತನಾಡಿದ ಅವರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದಟಛಿ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಸಂಚಾರಿ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿರುವುದು ಕಂಡು ಬಂದರೆ ಅಂತಹ ಚಾಲಕರ ಪರವಾನಗಿ ರದ್ದು ಮಾಡುವ ಅಥವಾ ಜೈಲಿಗೆ ಕಳುಹಿಸುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಚಾಲಕರಲ್ಲದೇ ಬೇರೆಯವರಿಗೂ ತೊಂದರೆಯಾಗುತ್ತದೆ. ಅಮಲಿನಲ್ಲಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುತ್ತವೆ. ಅನಾಹುತಗಳನ್ನು ತಪ್ಪಿಸಲು ಹಾಗೂ ವಾಹನ ಚಾಲಕರಿಗೆ ಅರಿವು ಮೂಡಿಸುವ ಸಲುವಾಗಿ ಈ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ವೇಳೆ ಸಂಚಾರ ಸಲಹೆಗಾರ ಎಂ.ಎನ್. ಶ್ರೀಹರಿ, ಬಿಬಿಎಂಪಿ ಪುನರಚನೆ ತಜ್ಞ ಸಮಿತಿ ಸದಸ್ಯ ವಿ.ರವಿಚಂದರ್ ಹಾಗೂ ಇತರರು ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com