ಮರೆಯಾದ ಮಾನವೀಯತೆ

ಬೆಂಗಳೂರು: ಮಾನವ ಹಕ್ಕುಗಳು ಕೇವಲ ದಿನಾಚರಣೆಯಾಗಿ ಉಳಿಯದೆ, ಪ್ರತಿನಿತ್ಯ ಸಂರಕ್ಷಣೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ
ಸದಸ್ಯ ಪಿ.ಜಿ.ಹುನಗುಂದ ಹೇಳಿದರು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಭಾನುವಾರ ಉದಯಭಾನು ಕಲಾ ಸಂಘದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಯುಗದಲ್ಲಿ ಜನರು ಮಾನವೀಯತೆಯನ್ನೇ ಕಳೆದುಕೊಳ್ಳುತ್ತಿದ್ದಾರೆ. ಸಾವಿರಾರು ಮೈಲಿ ದೂರದಲ್ಲಿರುವವರ ಜೊತೆ ಕೂತಲ್ಲೇ ಮಾತ ನಾಡುವ ತಂತ್ರಜ್ಞಾನ ಯುಗದಲ್ಲಿ, ನಮ್ಮ ನೆರೆಹೊರೆಯವರ ಬಗ್ಗೆ ತಿಳಿದುಕೊಳ್ಳದಂತಹ ಮಾನವೀಯ ಗುಣಗಳನ್ನು ಮರೆಯುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತಿವರ್ಷ ಆಚರಿಸುವುದಕ್ಕಿಂತ ನಿತ್ಯ ಹಕ್ಕುಗಳ ಸಂರಕ್ಷಣೆಯಾಗ ಬೇಕು. ಸಮಾಜದ ಎಲ್ಲ ಜಾತಿ, ಧರ್ಮಗಳು ಕೂಡ ಮಾನವ ಹಕ್ಕುಗಳನ್ನು ಪ್ರತಿಪಾದಿಸುತ್ತಾ ಬಂದಿವೆ. ಬಸವಣ್ಣನವರು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ್ದರಿಂದಲೇ ಲಂಡನ್ನಲ್ಲಿ ಅವರ ಪುತ್ಥಳಿ ನಿರ್ಮಾಣವಾಗಿದೆ. ಇದನ್ನರಿತು ಪ್ರತಿಯೊಬ್ಬರು ಮಾನವೀಯತೆಯನ್ನು ಗೌರವಿಸಬೇಕು. ಭಾಷೆ, ಧರ್ಮದ ಬಗ್ಗೆ ಅಭಿಮಾನ ಇರಬೇಕೇ ಹೊರತು, ದುರಾಭಿಮಾನ ಇರಬಾರದು. ಸರ್ವರನ್ನು ಸಮಾನವಾಗಿ ಕಾಣುವಂತಾಗಬೇಕು. ಸಮಾಜದ ಕಟ್ಟಕಡೆಯ ಮನುಷ್ಯನೂ ಅಭಿವೃದ್ಧಿ ಹೊಂದುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಅಧ್ಯಕ್ಷ ಡಾ.ಮೋಹನ್ರಾವ್ ನಲವಡೆ, ಕಾರ್ಪೊರೇಟರ್ ಡಿ.ಎನ್.ರಮೇಶ್, ಚಿತ್ರನಟ ಶ್ರೀನಗರ ಕಿಟ್ಟಿ, ಕಿರುತೆರೆ ನಟಿ ಜಯಶ್ರೀ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


