
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ 57ನೇ ಜನ್ಮದಿನವನ್ನು ಆಚರಿಸಿಕೊಂಡರು.
ಬೆಂಗಳೂರಿನ ಯುಬಿ ಸಿಟಿ ಬಳಿ ಇರುವ ಫ್ಲ್ಯಾಟ್‌ನಲ್ಲಿ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ನಂತರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.'ಪ್ರತಿವರ್ಷವೂ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಜೊತೆ ಅವರ ಅಭಿಲಾಷೆಯಂತೆ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದೇನೆ' ಎಂದರು.
ತಮ್ಮ ಪುತ್ರ ನಿಖಿಲ್ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾನೆ. ಸಂಜೆ ಸಿನಿಮಾದ ಮುಹೂರ್ತವಿದೆ. ಇದೇ ಈ ಬಾರಿಯ ಹುಟ್ಟುಹಬ್ಬದ ವಿಶೇಷವಾಗಿದೆ. ರಾಜಕೀಯ ಹೊರತು ಪಡಿಸಿ ಸಿನಿಮಾ ಕ್ಷೇತ್ರದಲ್ಲಿ ಮಗ ಜನರ ಮನೆಗೆಲ್ಲುತ್ತಾನೆ ಎಂಬ ವಿಶ್ವಾಸವಿದೆ' ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು. ಸಂಜೆ 4.30ಕ್ಕೆ ಕುಮಾರಸ್ವಾಮಿ ಪತ್ರ ನಿಖಿಲ್ ಕುಮಾರ್ ಅವರ ಮೊದಲ ಚಿತ್ರ 'ಜಾಗ್ವಾರ್' ಮುಹೂರ್ತ ಸಮಾರಂಭವಿದೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.
Advertisement