ಅನುಮಾನಾಸ್ಪದ ಸಾವನ್ನಪ್ಪಿದ ಕ್ಯಾಬ್ ಚಾಲಕ

ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ತುಮಕೂರು ಮೂಲದ ನವೀನ್ ಕುಮಾರ್ (29) ಮೃತ ಯುವಕ. ನಗರದ ಎಚ್‍ಎಎಲ್‍ನ ರಮೇಶ್ ನಗರದ ವಾಸಿ ನವೀನ್ ಕುಮಾರ್ ಮಂಗಳವಾರ ತಡ ರಾತ್ರಿ 11.30ರ ವೇಳೆಯಲ್ಲಿ ಮಾರತ್‍ಹಳ್ಳಿ ಸೇತುವೆ ಬಳಿ ಕ್ಯಾಬ್‍ನಲ್ಲಿ ಬರುವಾಗ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆದರೆ, ನವೀನ್ ಮೈಮೇಲೆ ಚೂರಿ ಇರಿತದ ಗುರುತುಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಇದು ಕೊಲೆ ಅಥವಾ ಆತ್ಮಹತ್ಯೆಯೇ ಎಂಬ ಅನುಮಾನವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com