
ಬೆಂಗಳೂರು: ಕಾನೂನು ಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀಡಿದ್ದ ಆದೇಶ ಪಾಲಿಸದ ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ಬೆರ್ತಾಲೋಮಿಯೋ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್.ಕುಮಾರ್ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, ಚರ್ಚ್‍ನ ಆಚ್ರ್ ಬಿಷಪ್ ಬರ್ನಾಡ್ ಮೋರಸ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಕಮ್ಮನಹಳ್ಳಿಯ ಮುಖ್ಯರಸ್ತೆಯಲ್ಲಿ ಕಾನೂನುಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿರುವ ಕುರಿತು, ಬಿಬಿಎಂಪಿ ಅಧಿಕಾರಿಗಳ ಸ್ಥಳ ಪರಿಶೀಲನೆ ನಡೆಸಿ ಅಕ್ರಮವಿದ್ದಲ್ಲಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಪಾಲಿಕೆ ಎಂಜಿನಿಯರ್ ಚರ್ಚ್ ನಿರ್ಮಾಣದಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವರದಿ ನೀಡಿದ್ದರು. ಈ ವರದಿ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಪಾಲಿಸದ ಬಿಬಿಎಂಪಿ ಆಯುಕ್ತರ ವಿರುದ್ಧ ಬೆರ್ತಾಲೋಮಿಯೋ ಮತ್ತೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
Advertisement