ಕೆಎಸ್‍ಆರ್‍ಟಿಸಿ ನೌಕರರ ವೇತನ ಪರಿಷ್ಕರಣೆಗೆ ಒತ್ತಾಯ

ಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್...
ಕೆಎಸ್ಆರ್ ಟಿಸಿ
ಕೆಎಸ್ಆರ್ ಟಿಸಿ

ಬೆಂಗಳೂರು: ಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಫೆಡರೇಷನ್ ಗೌರವಾಧ್ಯಕ್ಷ ಎಸ್. ಪ್ರಸನ್ನ ಕುಮಾರ್, ಅಧ್ಯಕ್ಷ ಎಚ್.ಡಿ. ರೇವಪ್ಪ ಮಾತನಾಡಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಈಶಾನ್ಯ, ವಾಯುವ್ಯ, ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಬೇಕಿದೆ ಎಂದರು. ಈ ನಿಗಮಗಳಲ್ಲಿ 1.20 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ ಎಲ್ಲಾ ವಿಭಾಗಗಳ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಲಾಗಿದೆ. ನಮಗೆ ಮಾತ್ರ ವೇತನ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ 7ನೇ ವೇತನ ಆಯೋಗ ಅನುಷ್ಠಾನಕ್ಕೆ ಮುಂದಾಗಿದೆ.

ನಮ್ಮ ರಾಜ್ಯ ಸರ್ಕಾರವೂ ಕೂಡ ವೇತನ ಪರಿಷ್ಕರಣೆ ಮಾಡಬೇಕು. ಜ.1ರಂದು ಪರಿಷ್ಕರಣೆ ನಡೆಯಲಿದೆ. ಡಿ.19ಕ್ಕೆ ಎಲ್ಲರಿಗೂ ಸಭೆಯನ್ನು ಕರೆಯಲಾಗಿದೆ ಒಂದು ವೇಳೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇವಲ ಆಶ್ವಾಸನೆಯಾದರೆ ತೀವ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com