ಬೋರ್‍ವೆಲ್ ಕೊರೆಯಲು ಇನ್ನು ಅನುಮತಿ ಕಡ್ಡಾಯ

ಕೊಳವೆ ಬಾವಿ ಕೊರೆಯಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಅಂತರ್ಜಲ ಸಂಪನ್ಮೂಲ ಮೌಲ್ಯೀಕರಣದಂತೆ 30 ತಾಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲೂಕುಗಳೆಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ತಾಲೂಕುಗಳಲ್ಲಿ ಕೊಳವೆ ಬಾವಿ ಕೊರೆಯಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಧಾನ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

 ಈ 30 ತಾಲೂಕುಗಳ ಜತೆಗೆ, ಉಳಿದ 146 ತಾಲೂಕುಗಳಲ್ಲಿಯೂ ಸಹ ಕೊಳವೆ ಬಾವಿಯನ್ನು ಕೊರೆಯಲು ಪ್ರಾಧಿಕಾರದಿಂದ ನೋಂದಾಯಿತ ರಿಗ್ ಸಂಸ್ಥೆಗಳಿಂದ ಕೊರೆಸುವುದು ಕಡ್ಡಾಯವಾಗಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ, ಬಾಗಲಕೋಟೆ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ; ಬೆಂಗಳೂರು ನಗರ ಜಿಲ್ಲೆಯ ಆನೇಕಲ್, ಬೆಂಗಳೂರು ಪೂರ್ವ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ; ಬೆಳಗಾವಿಯ ರಾಮದುರ್ಗ; ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ; ಚಿಕ್ಕಮಗಳೂರು ಜಿಲ್ಲೆಯ ಕಡೂರು; ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ಹೊಳಲ್ಕೆರೆ, ದಾವಣಗೆರೆ ಜಿಲ್ಲೆಯ ಜಗಳೂರು, ಕೋಲಾರ ಜಿಲ್ಲೆಯ ಬಂಗಾರ ಪೇಟೆ ಕೋಲಾರ, ಮಾಲೂರು, ಮುಳಬಾಗಿಲು; ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ,ಶಿಢ್ಲಘಟ್ಟ, ಶ್ರೀನಿವಾಸಪುರ. ರಾಮನಗರ
ಚಿಕ್ಕನಾಯಕನಹಳ್ಳಿ, ಕೊರಟಗೆರೆ ಹಾಗೂ ಮಧುಗಿರಿ ತಾಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲೂಕುಗಳೆಂದು ಪಟ್ಟಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com